ಸನ್ಮಾರ್ಗ ವಾರ್ತೆ
ಹೊಸದಿಲ್ಲಿ: ನ್ಯಾಯಾಧೀಶರನ್ನು ಆಯ್ಕೆ ಮಾಡುವ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಕೊಲಿಜಿಯಂನಲ್ಲಿ ಸರ್ಕಾರಿ ಪ್ರತಿನಿಧಿಗಳನ್ನು ಕೂಡಾ ಸೇರ್ಪಡೆಗೊಳಿಸಬೇಕೆಂದು ಆಗ್ರಹಿಸಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಸುಪ್ರೀಂ ಕೋರ್ಟಿನ ಚೀಫ್ ಜಸ್ಟಿಸ್ ಡಿ.ವೈ ಚಂದ್ರಚೂಡ್‌ರವರಿಗೆ ಪತ್ರ ಬರೆದಿದ್ದಾರೆ.
ಸುಪ್ರೀಮ್ ಕೋರ್ಟಿನ ಕೊಲಿಜಿಯಂನ ಪಾರದರ್ಶಕತೆಗೆ ಕೇಂದ್ರ ಸರ್ಕಾರದ ಪ್ರತಿನಿಧಿಯಿರಬೇಕು ಎಂದು ಕಾನೂನು ವಿಭಾಗ ಹೇಳಿತ್ತು. ಕೊಲಿಜಿಯಂ ವ್ಯವಸ್ಥೆಯಲ್ಲಿ ಪಾರದರ್ಶಕತೆಯಿಲ್ಲ ಎಂದು ಕೆಲವು ದಿನಗಳ ಹಿಂದೆ ಕಾನೂನು ಸಚಿವ ಕಿರಣ್ ರಿಜಿಜು ವಿಮರ್ಶಿಸಿದ್ದರು. ಇದರ ಮುಂದುವರಿದ ಭಾಗವಾಗಿ ಸರಕಾರದ ಪರ ಈಗ ಹೊಸ ಪತ್ರವೊಂದನ್ನು ಅವರು ಬರೆದಿದ್ದಾರೆ.
ಪ್ರಸ್ತುತ ಕೊಲಿಜಿಯಂ ತಂಡದಲ್ಲಿ ಚೀಫ್ ಜಸ್ಟಿಸ್ ಡಿ.ವೈ ಚಂದ್ರಚೂಡ್ ಹಾಗೂ ಇತರ ನ್ಯಾಯಾದೀಶರುಗಳಾದ ಸಂಜಯ್ ಕಿಶನ್ ಕೌಲ್, ಕೆಎಂ ಜೋಸೆಫ್, ಎಂಆರ್ ಶಾ, ಅಜಯ್ ರಸ್ತೋಗಿ ಮತ್ತು ಸಂಜೀವ್ ಖನ್ನ ಇದ್ದಾರೆ.












