ಜ. 21: ಎಸ್‌ಜೆಎಂ ನೇತೃತ್ವದಲ್ಲಿ ಮಾದಕದ್ರವ್ಯ ವಿರೋಧಿ ಜನಜಾಗೃತಿ ಕಾರ್ಯಕ್ರಮ

0
367

ಸನ್ಮಾರ್ಗ ವಾರ್ತೆ

ಮಂಗಳೂರು: ಮಾದಕ ದ್ರವ್ಯ ಸೇವನೆಗೆ ಪ್ರಾಥಮಿಕ ಶಾಲೆಯಿಂದಲೇ ಆರಂಭವಾಗುತ್ತಿದೆ. ಪದವಿ, ಸ್ನಾತಕೋತ್ತರ ಪದವಿ ಪಡೆದವರೂ ಸಹ ಇದಕ್ಕೆ ಬಲಿಯಾಗಿರುವುದು ಖೇದಕರ ಸಂಗತಿ ಎಂದು ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಕೆ.ಎಂ ಕಾಮಿಲ್ ಸಖಾಫಿ ಕೃಷ್ಣಾಪುರ ತಿಳಿಸಿದ್ದಾರೆ. ಈ ವಿಷಯದಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಜನಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿರುವುದಾಗಿ ಹೇಳಿದ್ದಾರೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಕೆ.ಎಂ ಕಾಮಿಲ್ ಸಖಾಪಿ, ಜನವರಿ 21 ರಂದು ಎಸ್‌ಜೆಎಂ ನೇತೃತ್ವದಲ್ಲಿ ಮಾದಕದ್ರವ್ಯ ವಿರೋಧಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ. ಈ ರ‍್ಯಾಲಿ ರಾಜ್ಯಾದ್ಯಂತ ಜನವರಿ 21 ರಂದು ಅಪರಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ರಾಜ್ಯ ಸಮಿತಿಯು, “ಮಾದಕ ದ್ರವ್ಯ ಆವೇಶ, ಸಮಾಜದ ವಿನಾಶ” ಎಂಬ ಘೋಷಣೆಯೊಂದಿಗೆ, ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ರಾಜ್ಯದ ಸಾವಿರಕ್ಕೂ ಅಧಿಕ ಮದ್ರಸಾಗಳಲ್ಲಿ ಧಾರ್ಮಿಕ ಶಿಕ್ಷಣ ಪಡೆಯುತ್ತಿರುವ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ, ಎರಡು ಸಾವಿರದಷ್ಟು ಸಂಖ್ಯೆಯ ಮದ್ರಸಾ ಅಧ್ಯಾಪಕರ ನೇತೃತ್ವದಲ್ಲಿ ಹಾಗೂ ಮದ್ರಸ ಆಡಳಿತ ಸಮಿತಿ, ಸ್ಥಳೀಯ ಸುನ್ನೀ ಸಂಘ ಕುಟುಂಬಗಳ ಸಹಕಾರದೊಂದಿಗೆ, ರೇಂಜ್ ಕೇಂದ್ರಗಳಲ್ಲಿ ಮದ್ರಸ ವಿದ್ಯಾರ್ಥಿಗಳಿಂದ ರ‍್ಯಾಲಿ ಹಾಗೂ ಸಂದೇಶ ಭಾಷಣ ಹಮ್ಮಿಕೊಳ್ಳಲಾಗಿದೆ ಎಂದರು.