ಸನ್ಮಾರ್ಗ ವಾರ್ತೆ
ಹೊಸ ನರ್ಸಿಂಗ್ ಕಾಲೇಜ್, ಐಸಿಎಂಆರ್ ಸೌಲಭ್ಯ; ಆರೋಗ್ಯ ಕ್ಷೇತ್ರಕ್ಕೆ ಹೊಸ ಬಲ
2015ರಿಂದ ಆರಂಭವಾಗಿರುವ ಹೊಸ ಮೆಡಿಕಲ್ ಕಾಲೇಜುಗಳಿಗೆ ಹತ್ತಿರದಲ್ಲಿಯೇ ಹೊಸದಾಗಿ 157 ನರ್ಸಿಂಗ್ ಕಾಲೇಜು ಆರಂಭ. ಸಿಕಲ್ ಸೆಲ್ ಅನಿಮಿಯಾ ಕಾಯಿಲೆಯನ್ನು 2047 ರ ಒಳಗೆ ನಿರ್ಮೂಲನೆ. ಐಸಿಎಂಆರ್ ಲ್ಯಾಬ್ಗಳನ್ನು ಸಾರ್ವಜನಿಕ ಮತ್ತು ಖಾಸಗಿ ವೈದ್ಯಕೀಯ ಸಂಶೋಧನೆಗೆ ಅವಕಾಶ. ಔಷಧ ವಿಜ್ಞಾನದಲ್ಲಿ ಸಂಶೋಧನೆಗೆ ಉತ್ತೇಜನ ನೀಡಲು ಹೊಸ ಕಾರ್ಯಕ್ರಮ.
ಮೀನುಗಾರರು, ಕರಕುಶಲಕರ್ಮಿಗಳಿಗೆ ಉತ್ತೇಜನ:
ಪಿಎಂ ಮತ್ಸ್ಯ ಸಂಪದ ಯೋಜನೆಯಡಿ 6,000 ಕೋಟಿ ಮೊತ್ತದ ಅನುದಾನ. ಪಿಎಂ ವಿಶ್ವಕರ್ಮ ಕೌಶಲ ಸನ್ಮಾನ್ ಯೋಜನೆಯಡಿ ಪಾರಂಪರಿಕ ಕರಕುಶಲಕರ್ಮಿಗಳಿಗೆ ನೆರವು. ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲ ಒದಗಿಸುವುದಾಗಿ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.
ಮುಂದಿನ ಹಣಕಾಸು ವರ್ಷದಲ್ಲಿ ರೈಲ್ವೆಗೆ 2.40 ಲಕ್ಷ ಕೋಟಿ ರೂ
ಬರಗಾಲ ಪೀಡಿತ ಪ್ರದೇಶಗಳಿಗೆ ನೀರಾವರಿ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ ಅನುದಾನ ಘೋಷಣೆ. ಇ-ಕೋರ್ಟ್ಗಳ ಹಂತ-III ಪ್ರಾರಂಭಿಸಲಾಗುವುದು
ವಸತಿ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ, 79,000ಕೋಟಿ ಅನುದಾನ, ಕಳೆದ ವರ್ಷಕ್ಕೆ ಹೋಲಿಸಿದರೆ ವಸತಿ ಕ್ಷೇತ್ರಕ್ಕಾಗಿ ಮೀಸಲಿಟ್ಟಿರುವ ಹಣ ಶೇ.66ರಷ್ಟು ಹೆಚ್ಚಾಗಿದೆ.
ಉದ್ಯಮಸ್ನೇಹಿ ವಾತಾವರಣಕ್ಕೆ ಉತ್ತೇಜನ
ದೇಶದಲ್ಲಿ ಉದ್ಯಮಸ್ನೇಹಿ ವಾತಾವರಣ ನಿರ್ಮಿಸಲು ಮತ್ತಷ್ಟು ಕ್ರಮ, ಉದ್ಯಮಗಳು ಪ್ರತ್ಯೇಕ ಪ್ಯಾನ್ ನಂಬರ್ ಹೊಂದಬೇಕು. ಈ ನಂಬರ್ ಆಧರಿಸಿ ಉದ್ಯಮಿಗಳ ಕುಂದುಕೊರತೆಯನ್ನು ಶೀಘ್ರ ಪರಿಹಾರ. ಹಲವು ನಿಯಮಗಳನ್ನು ಸಡಿಲಿಕೆ.












