ಮಂಗಳೂರು: ಮಸೀದಿ ಕಟ್ಟಡ ತೆರವುಗೊಳಿಸುತ್ತಿದ್ದಾಗ ಏಕಾಏಕಿ ಕುಸಿದ ಗೋಪುರ

0
480

ಸನ್ಮಾರ್ಗ ವಾರ್ತೆ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆಯಲ್ಲಿ ಮಸೀದಿಯ ಕಟ್ಟಡ ತೆರವುಗೊಳಿಸುತ್ತಿದ್ದಾಗ ಮಸೀದಿಯ ಗೋಪುರ(ಮಿನಾರ) ಏಕಾಏಕಿ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದ ಘಟನೆ ಮಂಗಳೂರು ನಗರದ ಹೊರವಲಯದ ನುಳ್ಳಿಪ್ಪಾಡಿಯಲ್ಲಿ ಎಂಬಲ್ಲಿ ನಡೆದಿದೆ.

ರಸ್ತೆ ಬದಿಯಲ್ಲಿದ್ದ ಮಸೀದಿ ಕಟ್ಟಡವನ್ನು ಜೆಸಿಬಿ ಸಹಾಯದಿಂದ ತೆರವುಗೊಳಿಸಲಾಗುತ್ತಿತ್ತು. ಈ ವೇಳೆ ಕಟ್ಟಡದ ಮುಂಭಾಗ ಏಕಾಏಕಿ ಕುಸಿದ ಪರಿಣಾಮ ಎತ್ತರದ ಗೋಪುರ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದಿದೆ.

ಈ ಸಂದರ್ಭದಲ್ಲಿ ಹಲವಾರು ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದವು. ಅಲ್ಲದೇ ತೆರವು ಕಾರ್ಯ ನೋಡಲು ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದರು. ಆದರೆ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ಹೊಸ ಬಸ್ ನಿಲ್ದಾಣದಿಂದ ನುಳ್ಳಿಪ್ಪಾಡಿ ತನಕದ ಹೈಟೆನ್ಶನ್ ಸೇರಿದಂತೆ ಹತ್ತಕ್ಕೂ ಅಧಿಕ ಕಂಬಗಳು ನೆಲಕಚ್ಚಿವೆ. ನಗರದಲ್ಲಿ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಅಗ್ನಿಶಾಮಕ ದಳ, ಕೆಇಬಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ತೆರವು ಕಾರ್ಯ ನಡೆಸಿದರು.