ಸನ್ಮಾರ್ಗ ವಾರ್ತೆ
ಹೊಸದಿಲ್ಲಿ: ಬಾಲಕಿ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಹಲವು ಕಾಲದಿಂದ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಯೋಗ ಗುರು ರಾಮ್ದೇವ್ ಬೆಂಬಲ ಸೂಚಿಸಿದ್ದಾರೆಂದು ಲೈವ್ ಹಿಂದುಸ್ತಾನ್ ವರದಿ ಮಾಡಿದೆ.
“ದೇಶದ ಕುಸ್ತಿಪಟುಗಳು ಜಂತರ್ ಮಂತರ್ ನಲ್ಲಿ ಒಕ್ಕೂಟದ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡುತ್ತಿರುವುದು ನಾಚಿಕೆಗೇಡು. ಇಂತಹವರನ್ನು ಕೂಡಲೇ ಬಂಧಿಸಿ ಕಂಬಿ ಎಣಿಸುವಂತೆ ಮಾಡಬೇಕು.
ದಿಲ್ಲಿ ಪೊಲೀಸರು ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರವೂ ಅವರನ್ನು ಬಂಧಿಸದಿರಲು ಕಾರಣವೇನೆಂದು ಕೇಳಿದಾಗ ಪ್ರತಿಕ್ರಿಯಿಸಿದ ರಾಮ್ದೇವ್, “ನಾನು ಹೇಳಿಕೆಯನ್ನು ಮಾತ್ರ ನೀಡಬಲ್ಲೆ. ಆತನನ್ನು ಜೈಲಿನಲ್ಲಿಡಲು ನನಗೆ ಸಾಧ್ಯವಿಲ್ಲ” ಎಂದರು.
“ನಾನು ಎಲ್ಲಾ ಪ್ರಶ್ನೆಗಳಿಗೆ ರಾಜಕೀಯವಾಗಿ ಉತ್ತರಿಸಲು ಸಮರ್ಥನಿದ್ದೇನೆ. ನಾನು ಬೌದ್ಧಿಕವಾಗಿ ದಿವಾಳಿಯಲ್ಲ. ನಾನು ಮಾನಸಿಕವಾಗಿ ಅಥವಾ ಬೌದ್ಧಿಕವಾಗಿ ವಿಕಲಾಂಗನಲ್ಲ. ನನಗೆ ದೇಶದ ಬಗ್ಗೆ ದೂರದೃಷ್ಟಿ ಇದೆ” ಎಂದು ರಾಮ್ದೇವ್ ಹೇಳಿದ್ದಾರೆಂದು ‘ India Today’ ಉಲ್ಲೇಖಿಸಿದೆ.
ವಿನೇಶ್ ಫೋಗಟ್ ಹಾಗೂ ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ ಹಾಗೂ ಸಾಕ್ಷಿ ಮಲಿಕ್ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಸಿಂಗ್ ಬಂಧನಕ್ಕೆ ಒತ್ತಾಯಿಸಿ ಎಪ್ರಿಲ್ 23 ರಿಂದ ದಿಲ್ಲಿಯ ಜಂತರ್ ಮಂತರ್ನಲ್ಲಿ ಧರಣಿ ನಡೆಸುತ್ತಿದ್ದಾರೆ.












