‘ಇಂದಿರಾ ಕ್ಯಾಂಟೀನ್‌’ ದರ ಏರಿಕೆ ಇಲ್ಲ, ಆಹಾರದ ಗುಣಮಟ್ಟ ಹೆಚ್ಚಿಸಲಾಗುವುದು: ಸಿದ್ದರಾಮಯ್ಯ

0
409

ಸನ್ಮಾರ್ಗ ವಾರ್ತೆ

ಬೆಂಗಳೂರು: ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರದ ಗುಣ ಮಟ್ಟವನ್ನು ಹೆಚ್ಚಿಸಲಾಗುವುದು. ದರ ಏರಿಕೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್ ವಿಷಯವನ್ನು ಪ್ರಸ್ತಾಪಿಸಿ ಸರಣಿ ಟ್ವಿಟ್ ಮಾಡಿರುವ ಅವರು, ‘ಇಂದಿರಾ ಕ್ಯಾಂಟೀನ್‌ನಲ್ಲಿ ದೊರೆಯುವ ಆಹಾರದಲ್ಲಿ ಬದಲಾವಣೆಯ ಜತೆಗೆ, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವವನ್ನು ಕಾಪಾಡುವಂತೆ ಸೂಚಿಸಲಾಗಿದೆ. ದರ ಪರಿಷ್ಕರಿಸುವುದಿಲ್ಲ.

ವಲಯ ಮಟ್ಟದಲ್ಲಿ ಕರೆಯಲಾಗುವ ಟೆಂಡರ್ ಪ್ರಕ್ರಿಯೆ ಬಳಿಕ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಪುನರಾರಂಭಿಸುವುದಾಗಿ ಹೇಳಿದರು.

‘ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ವಿವಿಧೆಡೆ ಇಂದಿರಾ ಕ್ಯಾಂಟೀನ್‌ ವೆಚ್ಚದಲ್ಲಿ ಸರ್ಕಾರ ಶೇ 70ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ 30ರಷ್ಟು ಭರಿಸುವಂತೆ ತೀರ್ಮಾನಿಸಲಾಗಿದೆ.

ರಾಜ್ಯದ ಯಾವುದೇ ಪ್ರದೇಶಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಬಯಸುವುದಾದರೆ ಆ ಪ್ರದೇಶದ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ’ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.