ಅರಬ್ ರಾಷ್ಟ್ರಗಳಲ್ಲಿ ದುಡಿಯ ಬಯಸುವವರಿಗೆ ಶುಭ ಸುದ್ದಿ: ಲುಲೂ ಸಂಸ್ಥೆಯಿಂದ ಮಂಗಳೂರಿನಲ್ಲಿ ಜೂನ್ 22- 23ರಂದು ನೇಮಕಾತಿ ಸಂದರ್ಶನ

0
2536

ಸನ್ಮಾರ್ಗ ವಾರ್ತೆ

ಏಷ್ಯಾದ ಅತಿ ದೊಡ್ಡ ಹೈಪರ್ ಮಾರ್ಕೆಟ್ ಲುಲು ಸಮೂಹವು ಮಂಗಳೂರಿನಲ್ಲಿ ತಮ್ಮ ಮೊದಲ ನೇಮಕಾತಿ ಸಂದರ್ಶನವನ್ನು ಏರ್ಪಡಿಸಿದೆ. ಯುಎಇ, ಖತಾರ್, ಬಹ್ರೇನ್, ಮಸ್ಕತ್, ಸೌದಿ ಅರೇಬಿಯಾ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ದೇಶಗಳನ್ನು ಒಳಗೊಂಡಂತೆ ಏಷ್ಯಾದಾದ್ಯಂತ ವ್ಯಾಪಕವಾಗಿ ನಡೆಸುತ್ತಿರುವ ಲುಲು ಸಂಸ್ಥೆ, ಈ ಪ್ರಮುಖ ರಿಟೈಲ್ ಉದ್ಯಮದ ವಿವಿಧ ಹುದ್ದೆಗಳಿಗೆ ಯುವ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ.

ಉದ್ಯೋಗವು ಮಾರಾಟ, ಕೌಂಟರ್ ಮಾರಾಟ ಮತ್ತು ಕ್ಯಾಷಿಯರ್ ಹುದ್ದೆಗಳನ್ನು ಒಳಗೊಂಡಿರುತ್ತವೆ. ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ನೌಕರರಾಗಿ ಅನುಭವವಿರುವ ವೃತ್ತಿಪರರು ಮತ್ತು ಪೂರ್ವ ಅನುಭವವಿಲ್ಲದವರು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ಕನಿಷ್ಠ ವಿದ್ಯಾರ್ಹತೆ ಪಿಯುಸಿಯಾಗಿದ್ದು (ಪ್ರಿ-ಯೂನಿವರ್ಸಿಟಿ ಕೋರ್ಸ್), ಅರ್ಜಿದಾರರು 21 ರಿಂದ 28 ವರ್ಷಗಳ ನಡುವಿನ ವಯಸ್ಸಿನವರಾಗಿರಬೇಕು. ಇಂಗ್ಲಿಷ್‌ನಲ್ಲ್ಲಿ ಸಂವಹನ ಮಾಡುವುದು ಅಭ್ಯರ್ಥಿಗಳಿಗೆ ಕಡ್ಡಾಯವಾಗಿದೆ.

ಹುದ್ದೆಗಳಿಗೆ ವೇತನ ಶ್ರೇಣಿಯು 1200 ಯುಎಇ ಧಿರ್ಹಮ್ ಗಳಿಂದ 1400 ಧಿರ್ಹಮ್ ತನಕ ಮತ್ತು 200 ಧಿರ್ಹಮ್ ಆಹಾರ ಭತ್ಯೆ ದೊರೆಯಲಿದೆ. ವಸತಿ, ವೀಸಾ ಮತ್ತು ವಿಮಾನ ಟಿಕೆಟ್ ವ್ಯವಸ್ಥೆಗಳನ್ನು ಸಂಸ್ಥೆಯು ನೋಡಿಕೊಳ್ಳುತ್ತದೆ.

ಸುಮಾರು 400 ಉದ್ಯೋಗ ಅವಕಾಶಗಳಿದ್ದು, 2023 ರ ಜೂನ್ 22 ಮತ್ತು 23 ರಂದು ಮಂಗಳೂರಿನ ಫೆರ್ನಾಂಡಿಸ್ ಗ್ರೂಪ್ ಕಛೇರಿಯಲ್ಲಿ ಬೆಳಿಗ್ಗೆ 9.೦೦ರಿಂದ ಸಂಜೆ 6.೦೦ರವರೆಗೆ ಸಂದರ್ಶನವನ್ನು ನಡೆಸಲಾಗುವುದು ಎಂದು ಫೆರ್ನಾಂಡಿಸ್ ಗ್ರೂಪ್ ಸಂಸ್ಥೆಯ ಪ್ರವರ್ತಕರಾದ ವಿಲ್ಸನ್ ಫೆರ್ನಾಂಡಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂದರ್ಶನ ಆಫೀಸಿನ ವಿಳಾಸ:

ಫೆರ್ನಾಂಡಿಸ್ ಗ್ರೂಪ್, ಮೆಟ್ರೋ ಪ್ಲಾಜಾ, 3ನೇ ಮಹಡಿ, ಆಕ್ಸಿಸ್ ಬ್ಯಾಂಕಿನ ಮೇಲಿನ ಮಹಡಿ, ಮೋರ್ ಸೂಪರ್ ಮಾರ್ಕೆಟಿನ ಎದುರುಗಡೆ, ವೆಲೆನ್ಸಿಯಾ, ಮಂಗಳೂರು 575002. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: +919686675463/9819044376