ಹೊಸದಿಲ್ಲಿ,ಮಾ.18: ಗೋವಾ ಮುಖ್ಯಮಂತ್ರಿ ಮನೋಹರ ಪಾರಿಕ್ಕರ್ ನಿಧನಕ್ಕೆ ಒಂದು ದಿವಸದ ಶೋಕಾಚರಣೆಯನ್ನು ಕೇಂದ್ರ ಸರಕಾರ ಘೋಷಿಸಿದೆ. ಗೃಹ ಸಚಿವಾಲಯ ಹೊರಡಿಸಿದ ಹೇಳಿಕೆಯಲ್ಲಿ ರಾಷ್ಟ್ರ ರಾಜಧಾನಿ ಮತ್ತು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳಲ್ಲಿ ಅರ್ಧಮಟ್ಟಕ್ಕೆ ರಾಷ್ಟ್ರಧ್ವಜವನ್ನು ಹಾರಿಸಬೇಕೆಂದು ತಿಳಿಸಲಾಗಿದೆ. ಜೊತೆಗೆ ಪಾರಿಕ್ಕರ್ರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರವನ್ನು ರಾಜಕೀಯ ಗೌರವದಿಂದ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಸರಕಾರ ದಿವಂಗತ ನಾಯಕನಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲು ಇಂದು ಕೇಂದ್ರ ಮಂತ್ರಿ ಮಂಡಲದ ಬೈಠಕ್ ಕರೆಯಲಾಗಿತ್ತು. ರವಿವಾರ ಪಾರಿಕ್ಕರ್ ನಿಧನರಾಗಿದ್ದು ಬಹಳ ಸಮಯದಿಂದ ಅವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು. ಅಮೆರಿಕ ಮತ್ತು ದಿಲ್ಲಿಯ ಆಸ್ಪತ್ರೆಗಳಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗಿತ್ತು.












