ಹೆರಿಗೆ ವೇಳೆ ರಕ್ತಸ್ರಾವ: ಆಶಾ ಕಾರ್ಯಕರ್ತೆ ಪುತ್ತೂರಿನ ಭವ್ಯ ಸಾವು

0
379

ಸನ್ಮಾರ್ಗ ವಾರ್ತೆ

ಹೆರಿಗೆ ವೇಳೆ ತೀವ್ರ ರಕ್ತಸ್ರಾವವಾಗಿ ಮಹಿಳೆ ಮೃತಪಟ್ಟ ಘಟನೆ‌ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಆಶಾ ಕಾರ್ಯಕರ್ತೆ ಭವ್ಯ (28), ಮೃತಪಟ್ಟ ಮಹಿಳೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ.

ಭವ್ಯ ಅವರಿಗೆ 3ನೇ ಹೆರಿಗೆಯಾಗಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಂಗಳವಾರ ರಾತ್ರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾಗುತ್ತಲೇ ತೀವ್ರ ರೀತಿಯಲ್ಲಿ ರಕ್ತಸ್ರಾವ ಉಂಟಾಗಿದ್ದು, ಇದನ್ನು ತಡೆಗಟ್ಟುವ ಚಿಕಿತ್ಸೆಯಿಂದ ಪ್ರಯೋಜನವಾಗದ ಕಾರಣ ಅವರನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.