ಮತಾಂತರ ನಿಷೇಧ ಮತ್ತು ಗೋ ಹತ್ಯೆ ಕಾಯ್ದೆಯ ಹಿಂಪಡೆಯಬೇಡಿ: ಪೇಜಾವರ ಶ್ರೀ

0
342

ಸನ್ಮಾರ್ಗ ವಾರ್ತೆ

ಮತಾಂತರ ತಡೆ ಮತ್ತು ಗೋ ಹತ್ಯೆ ನಿಷೇದ ಕಾನೂನನ್ನು ವಾಪಾಸ್ ಪಡೆಯುವ ದುಸ್ಸಾಹಸ ಕೈ ಬಿಡಿ ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮನವಿ ಮಾಡಿದ್ದಾರೆ.

ಅವರು ನಗರದಲ್ಲಿ ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್‌ ಪಡೆಯುವ ಕಾಂಗ್ರೆಸ್ ಸರ್ಕಾರದ ಕ್ರಮ ಕಳವಳಕಾರಿಯಾಗಿದೆ. ಮತಾಂತರ ಹಾವಳಿಯಿಂದ ಕುಟುಂಬಗಳು ಛಿದ್ರವಾಗುತ್ತಿರುವುದನ್ನು ಮನಗಂಡ ಹಿಂದಿನ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಿತ್ತು. ಗೋ ಕಳವು ತಡೆಯಲು ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಎರಡೂ ಕಾಯ್ದೆಗಳನ್ನು ಹಿಂಪಡೆಯಲು ತೀರ್ಮಾನಿಸಿರುವುದು ಕಳವಳಕಾರಿಯಾಗಿದೆ. ಕಾನೂನುಗಳ ಹಿಂಪಡೆಯುವ ದುಸ್ಸಾಹಸ ಮಾಡಬಾರದು ಎಂದು ಸ್ವಾಮೀಜಿ ಹೇಳಿದ್ದಾರೆ.

ಜನಾಭಿಪ್ರಾಯ ಪಡೆದು ಎರಡೂ ಕಾಯ್ದೆಗಳನ್ನು ಹಿಂಪಡೆಯದೆ ತಟಸ್ಥ ನಿಲುವು ತಾಳಬೇಕು ಎಂದು ಒತ್ತಾಯಿಸಿದ್ದಾರೆ. ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಕೂಡ ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ನಿಲುವು ಮರು ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.