ಸನ್ಮಾರ್ಗ ವಾರ್ತೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು.
ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡಿದರು.

ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸ್ಜಿದ್, ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್, ಪಂಪ್ ವೆಲ್ ನ ಮಸ್ಜಿದುತ್ತಖ್ವಾ, ಹಂಪನಕಟ್ಟೆಯ ಮಸ್ಜಿದುನ್ನೂರ್, ಸ್ಟೇಟ್ ಬ್ಯಾಂಕ್ ನ ಇಬ್ರಾಹೀಂ ಖಲೀಲ್ ಮಸ್ಜಿದ್, ಕಂಕನಾಡಿ ರಹ್ಮಾನಿಯಾ ಜುಮಾ ಮಸ್ಜಿದ್, ನಗರದ ವಾಸ್ಲೇನ್ ನ ಇಹ್ಸಾನ್ ಮಸ್ಜಿದ್, ಪಾಂಡೇಶ್ವರ ಪೊಲೀಸ್ ಲೇನ್ ನ ಫೌಝಿಯಾ ಜುಮಾ ಮಸ್ಜಿದ್, ಬಂದರ್ ಕಚ್ಚೀ ಮೇಮನ್ ಜುಮಾ ಮಸ್ಜಿದ್, ಬಂದರ್ ಕಂದುಕ ಬದ್ರಿಯಾ ಜುಮಾ ಮಸ್ಜಿದ್, ಬೋಳಾರ ಮುಹಿಯುದ್ದೀನ್ ಜುಮಾ ಮಸ್ಜಿದ್, ಕುದ್ರೋಳಿ ಜಾಮೀಯಾ ಜುಮಾ ಮಸ್ಜಿದ್, ಬಿಕರ್ನಕಟ್ಟೆ ಅಹಸನುಲ್ ಮಸಾಜೀದ್ ಸಹಿತ ಜಿಲ್ಲೆಯ ಜುಮಾ ಮಸ್ಜಿದ್ ಮತ್ತು ಈದ್ಗಾಗಳಲ್ಲಿ ಈದ್ ನಮಾಝ್ ನಡೆಯಿತು.













