ಸನ್ಮಾರ್ಗ ವಾರ್ತೆ
ಮಹಾರಾಷ್ಟ್ರ: ರಾಜ್ಯದ ಬುಲ್ಥಾನದಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತವೊಂದು ನಡೆದಿದೆ. ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್, ಬುಲ್ಥಾನ ಜಿಲ್ಲೆಯ ಸಿಂಧಖೇಡ್ ಸಮೃದ್ಧಿ ಮಹಾ ಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಅಚಾನಕಾಗಿ ಬೆಂಕಿ ಹತ್ತಿಕೊಂಡಿದ್ದು, 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರೆಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ರಕ್ಷಣಾ ಕಾರ್ಯವನ್ನು ನಡೆಸಿದ್ದಾರೆ.
ಬಸ್ ಅಪಘಾತದ ವೇಳೆ ಎಲ್ಲಾ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು. ಏನಾಗುತ್ತಿದೆ ಎನ್ನುವಷ್ಟರಲ್ಲೇ ಬೆಂಕಿ ಹೊತ್ತಿಕೊಂಡಿದ್ದೂ, ಸುಮಾರು 25 ಪ್ರಯಾಣಿಕರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಈ ಬಗ್ಗೆ ಪೊಲೀಸ್-ಆಡಳಿತ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.












