ಸನ್ಮಾರ್ಗ ವಾರ್ತೆ
ಕಾರ್ಕಳ: ಸಮಾಜದಲ್ಲಿ ಅಹಿಂಸೆ ಸಿದ್ದಾಂತವನ್ನು ಪ್ರತಿಪಾದಿಸಿರುವ ಜೈನ ಮುನಿಯನ್ನು ಭೀಕರವಾಗಿ ಕೊಲೆ ಮಾಡಿರುವುದು ಮನುಜ ಕುಲವೇ ತಲೆತಗ್ಗಿಸುವಂತಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಹೇಳಿದ್ದಾರೆ.
ಹತ್ಯಾ ಆರೋಪಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಬೇಕು. ಜೈನ ಮುನಿ ಹತ್ಯೆ ಸ್ವಾಸ್ಥ್ಯ ಶಾಂತ ಸಮಾಜ ಬಯಸುವವರಿಗೆ ಕರಾಳ ದಿನ ಇದನ್ನು ಜಾತಿ, ಧರ್ಮ, ಪಕ್ಷ ಅಥವಾ ಸರ್ಕಾರವೆಂದು ಲೆಕ್ಕಿಸದೆ ಎಲ್ಲರೂ ಖಂಡಿಸುವಂತೆ ಅವರು ಹೇಳಿದ್ದಾರೆ.
ಈ ಹತ್ಯೆಯ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕಾನೂನು ಕ್ರಮ ಜರಗಿಸುವಂತೆ ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯ ಡಿಕೆ ಶಿವಕುಮಾರ್ ಆದೇಶಿಸಿದ್ದಾರೆ.
ಹುಬ್ಬಳ್ಳಿಯ ವರೂರು ಶ್ರೀ ಗುಣಧರ ನಂದಿ ಮಹಾರಾಜ ಸ್ವಾಮೀಜಿಗಳು, ಎಲ್ಲಾ ಸ್ವಾಮೀಜಿಗಳಿಗೆ ಭದ್ರತೆ ನೀಡಬೇಕು ಎಂದು ಅನ್ನ, ನೀರು ತ್ಯಜಿಸಿ ಪ್ರತಿಭಟನೆಗೆ ಮುಂದಾಗಿರುವ ಮಾಹಿತಿ ಇದೆ. ಸ್ವಾಮೀಜಿಗಳಿಗೆ ಭದ್ರತೆ ನೀಡುವ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.
ಘಟನೆ ನಡೆದ ಕೇವಲ 24 ಗಂಟೆಯಲ್ಲಿ ಜೈನ ಮುನಿ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.












