ಸನ್ಮಾರ್ಗ ವಾರ್ತೆ
ಸಾರ್ವಜನಿಕ ಕುಂದುಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಕಚೇರಿಯು ಹೊಸ ಟ್ವಿಟರ್ ಖಾತೆಯನ್ನು ಆರಂಭಿಸಿದೆ
ಟ್ವಿಟರ್ ಖಾತೆಯ ಲಿಂಕ್
👇👇
https://twitter.com/osd_cmkarnataka –
ಈ ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು.
ಸಂಬಂಧ ಪಟ್ಟವರ ಗಮನಕ್ಕೆ ತರಲು ಈ ಕ್ರಮ
ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗಳ ಸಿಬ್ಬಂದಿಯ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಿಎಂ ಕಚೇರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಾರ್ವಜನಿಕರಿಗೆ ಸಿಎಂ ಮಟ್ಟಕ್ಕೆ ತಮ್ಮ ಸಮಸ್ಯೆಗಳನ್ನು ಕೊಂಡೊಯ್ಯವುದು ದೊಡ್ಡ ಸವಾಲಾಗಿತ್ತು. ಮಾತ್ರವಲ್ಲದೇ, ಯಾರನ್ನು ಸಂಪರ್ಕಿಸಬೇಕು, ಯಾವ ವಿಧಾನದ ಮೂಲಕ ಸಂಪರ್ಕಿಸಬೇಕು ಎಂಬ ಗೊಂದಲಗಳಿದ್ದವು. ಇದರಿಂದ ಸಾಕಷ್ಟು ಸಾರ್ವಜನಿಕ ಸಮಸ್ಯೆಗಳು ಹಾಗೆಯೇ ಉಳಿದುಬಿಡುತ್ತಿದ್ದವು. ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯು ಇದಕ್ಕೊಂದು ವೇದಿಕೆ ಕಲ್ಪಿಸಿಕೊಟ್ಟಿದೆ. ಇದೊಂದು ಜನಸ್ನೇಹಿ ನಡೆಯಾಗಿದೆ ಎಂದು ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.











