ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

0
330

ಸನ್ಮಾರ್ಗ ವಾರ್ತೆ

ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (79) ಮಂಗಳವಾರ ಬೆಳಗ್ಗೆ 4.25ರ ಸುಮಾರಿಗೆ ನಿಧನರಾದರು ಎಂದು ತಿಳಿದು ಬಂದಿದೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದ ಕಾರಣ ಮೃತಪಟ್ಟಿದ್ದಾರೆ. ಅವರು ಸಾವಿನ ಕುರಿತು ಅವರ ಪುತ್ರ ಚಾಂಡಿ ಉಮ್ಮನ್ ಫೇಸ್‌ಬುಕ್‌ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ.

ಉಮ್ಮನ್ ಚಾಂಡಿ ಅವರು 2004-06 ಮತ್ತು 2011-16ರ ಅವಧಿಯಲ್ಲಿ ಕೇರಳದ ಮುಖ್ಯಮಂತ್ರಿಯಾಗಿದ್ದರು.