ಕಲಬುರಗಿ| ಟೈರ್ ಸ್ಪೋಟಗೊಂಡು ಕಾರು ಪಲ್ಟಿ; ಓರ್ವರು ಮೃತ, ಇಬ್ಬರಿಗೆ ಗಾಯ

0
408

ಸನ್ಮಾರ್ಗ ವಾರ್ತೆ

ಕಲಬುರಗಿ: ಟೈರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿಯಾದ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಪೆಟ್ರೋಲ್ ಬಂಕ್ ಬಳಿ ಸೋಮವಾರ ವರದಿಯಾಗಿದೆ.

ಈ ಘಟನೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಮೋಮಿನಪುರದ ಮುಇಝುದ್ದೀನ್ (52) ಎಂದು ಗುರುತಿಸಲಾಗಿದೆ.

ಘಟನೆಯಿಂದ ಅವರ ಸಹೋದರ ನಜ್ಮುದ್ದೀನ್ ಉಮರಿ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.