ಸನ್ಮಾರ್ಗ ವಾರ್ತೆ
ನವದೆಹಲಿ: ಕರ್ನಾಟಕದ 4 ಶಿಕ್ಷಕರು ಸೇರಿದಂತೆ 75 ಮಂದಿ ಶಿಕ್ಷಕರು ಈ ಬಾರಿ ರಾಷ್ಟ್ರೀಯ ಶಿಕ್ಷಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಸೆ.5ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಈ ಬಾರಿ ದೇಶಾದ್ಯಂತ ಪ್ರಾಥಮಿಕ ಶಾಲೆಯಿಂದ 50 ಶಿಕ್ಷಕರು, ಪ್ರೌಢಶಾಲೆಯಿಂದ 13 ಶಿಕ್ಷಕರು ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದಿಂದ 12 ಮಂದಿ ಆಯ್ಕೆಯಾಗಿದ್ದಾರೆ. ಅಲ್ಲದೇ ಅತಿ ಹೆಚ್ಚು ಪ್ರಶಸ್ತಿಗಳನ್ನು ಪಡೆದುಕೊಂಡ ರಾಜ್ಯಗಳಲ್ಲಿ ಕರ್ನಾಟಕ 2ನೇ ಸ್ಥಾನ ಪಡೆದಿದೆ.












