ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ; ಶೌಚಾಲಯದಲ್ಲಿ ಬಾಗಿಲು ಹಾಕಿ ಜೀವ ಉಳಿಸಿಕೊಂಡ ವೃದ್ಧೆ

0
640

ಸನ್ಮಾರ್ಗ ವಾರ್ತೆ

ಉಡುಪಿ, ನ.12: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ.

ಕೊಲೆಯಾದವರನ್ನು ಹಸೀನಾ(46), ಅವರ ಮಕ್ಕಳಾದ ಅಫ್ಘಾನ್(22), ಅಯಾಝ್ (20) ಮತ್ತು ಅಸೀಮ್(12) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿರುವ ಮಾಹಿತಿ ಲಭ್ಯವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಾಲ್ವರ ಬರ್ಬರ ಹತ್ಯೆ ವೇಳೆ 70 ವರ್ಷದ ವೃದ್ಧೆ ದುಷ್ಕರ್ಮಿ ಆಕ್ರಮಣದಿಂದ ತಪ್ಪಿಸಿಕೊಂಡು ಶೌಚಾಲಯದೊಳಗೆ ತೆರಳಿ ಬಾಗಿಲು ಹಾಕಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ.