ಕೆಇಎ ಪರೀಕ್ಷೆಗೆ ಹಿಜಾಬ್ ನಿಷೇಧವಿಲ್ಲ: ಸಚಿವ ಸುಧಾಕರ್ ಸ್ಪಷ್ಟನೆ

0
291

ಸನ್ಮಾರ್ಗ ವಾರ್ತೆ

ಬೆಂಗಳೂರು : ‘ಅನಗತ್ಯ ಕ್ಯಾಪ್ ಅಥವಾ ಸ್ಕಾರ್ಫ್‌ಗಳ ಮೇಲಿನ ನಿಷೇಧವು ಹಿಜಾಬ್‌ಗೆ ಅನ್ವಯಿಸುವುದಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ. ಸುಧಾಕರ್ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.

ಕೆಇಎಯ ಹೊರಡಿಸಿದ್ದ ವಸ್ತ್ರ ಸಂಹಿತೆ ಆದೇಶ ಆಕ್ರೋಶಕ್ಕೆ ಕಾರಣವಾಗಿತ್ತು. ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ ಹಲವು ರಾಜಕಾರಣಿಗಳಿಂದ ಟೀಕೆಗೆ ಗುರಿಯಾಗಿತ್ತು.

ಪರೀಕ್ಷಾ ಸಮಯದಲ್ಲಿ ನಡೆಯುವ ಅವ್ಯವಹಾರಗಳನ್ನು ತಡೆಯುವುದೇ ವಸ್ತ್ರ ಸಂಹಿತೆಯ ಹಿಂದಿನ ಮುಖ್ಯ ಉದ್ದೇಶ ಎಂದು ಒತ್ತಿ ಹೇಳಿರುವ ಸಚಿವ ಸುಧಾಕರ್, ಹಿಜಾಬ್‌ಗಳು ಇತರ ತಲೆ ಹೊದಿಕೆಗಳಂತೆ ಬಳಸುವುದಕ್ಕೆ ಅಡ್ಡಿಯಾಗುವುದಿಲ್ಲ. ಹಿಜಾಬ್ ಧರಿಸಿ ಅಭ್ಯರ್ಥಿಗಳು ಪರೀಕ್ಷಾ ಅಕ್ರಮಕ್ಕೆ ಬ್ಲೂಟೂತ್ ಸಾಧನಗಳನ್ನು ಬಳಸಲು ಸಾಧ್ಯವಿಲ್ಲ. ಡ್ರೆಸ್ ಕೋಡ್ ನಿಯಮಗಳನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.