ಶಾಹಿ ಈದ್ಗಾ ಸಮೀಕ್ಷೆ : ಹೈಕೋರ್ಟ್ ಆದೇಶಕ್ಕೆ ‘ಸುಪ್ರೀಂಕೋರ್ಟ್’ ತಡೆ

0
367

ಸನ್ಮಾರ್ಗ ವಾರ್ತೆ

ಉತ್ತರ ಪ್ರದೇಶದ ಮಥುರಾದಲ್ಲಿರುವ ಶಾಹಿ ಈದ್ಗಾ ಮಸೀದಿಯಲ್ಲಿ ಸದ್ಯಕ್ಕೆ ಸರ್ವೇ ಬೇಡ ಎಂದಿರುವ ಸುಪ್ರೀಂ ಕೋರ್ಟ್‌, ಮಸೀದಿಯನ್ನು ಪರಿಶೀಲಿಸಲು ಆಯುಕ್ತರ ನೇಮಿಸುವ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. 

ಉತ್ತರ ಪ್ರದೇಶದ ಮಥುರಾದಲ್ಲಿರುವ 17ನೇ ಶತಮಾನದ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಕಮಿಷನರ್ ಓರ್ವರನ್ನು ನೇಮಿಸುವಂತೆ ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ನ್ಯಾಯಪೀಠ, ಡಿಸೆಂಬರ್ 14ರಂದು ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ನಡೆಸಿದ ರೀತಿಯಲ್ಲಿಯೇ ಹೈಕೋರ್ಟ್, ಕಳೆದ ತಿಂಗಳು ನ್ಯಾಯಾಲಯ ನೇಮಿಸಿದ ಮತ್ತು ಮೇಲ್ವಿಚಾರಣೆಯ ವಕೀಲ ಕಮಿಷನರ್ ಸಮೀಕ್ಷೆಗೆ ತನ್ನ ಒಪ್ಪಿಗೆ ನೀಡಿತ್ತು.