ಪಕ್ಕಲಡ್ಕ ಸ್ನೇಹ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ

0
383

ಸನ್ಮಾರ್ಗ ವಾರ್ತೆ

ಪಕ್ಕಲಡ್ಕ: ಇಲ್ಲಿನ ಸ್ನೇಹ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಸನ್ಮಾರ್ಗ ಸಂಪಾದಕ ಏ ಕೆ ಕುಕ್ಕಿಲ ಅವರು ಧ್ವಜಾರೋಹಣ ಮಾಡಿ ಮಾತಾಡಿದರು. ಪಿಟಿಎ ಅಧ್ಯಕ್ಷ ಮುಹಮ್ಮದ್ ಪಿ ಬಿ ಶುಭ ಕೋರಿದರು. ಶಾಲಾ ಕರೆಸ್ಪಾಂಡೆಂಟ್ ಯೂಸುಫ್ ಪಕ್ಕಲಡ್ಕ ಸಮಾರೋಪ ನುಡಿಗಳನ್ನಾಡಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ನುಸ್ ರತ್ ಪ್ರಾಸ್ತಾವಿಕವಾಗಿ ಮಾತಾಡಿದರು. ಶಿಕ್ಷಕಿ ಅನಿತಾ ನಿರೂಪಿಸಿದರು.

ಬಳಿಕ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ನಡುವೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಿತು. ವಿವಿಧ ರೀತಿಯ ಕಸರತ್ತುಗಳನ್ನು ಪ್ರದರ್ಶಿಸುವ ಮೂಲಕ ಮಕ್ಕಳು ಗಮನ ಸೆಳೆದರು.