ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಕಾಂಗ್ರೆಸ್ಸಿಗೆ ಸೇರ್ಪಡೆ

0
1019

<pಹೊಸದಿಲ್ಲಿ,ಎ.6: ಬಿಜೆಪಿ ಸಂಸದ ಶತ್ರುಘ್ನ ಸಿನ್ಹ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ. ದಿಲ್ಲಿಯ ಪಾರ್ಟಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‍ರ ಉಪಸ್ಥಿತಿಯಲ್ಲಿ ಅವರು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಕೆಲವು ದಿವಸಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಸಂದರ್ಶಿಸಿದ ಶತ್ರುಘ್ನ ಸಿನ್ಹಾ ಬೇಗನೆ ಕಾಂಗ್ರೆಸ್ ಸೇರ್ಪಡೆಯಾಗುವೆ ಎಂದು ಹೇಳಿದ್ದರು.

ಪಾಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಈ ಹಿಂದೆ ಬಿಜೆಪಿಯಿಂದ ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದರು. ಬಿಜೆಪಿಯಲ್ಲಿದ್ದುಕೊಂಡೇ ಮೋದಿ ಸರಕಾರವನ್ನು ಅವರು ಟೀಕಿಸಿದ್ದರು. ಈ ಬಾರಿ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಶತ್ರುಘ್ನ ಸಿನ್ಹಾರ ಹಾಲಿ ಸೀಟಿನಲ್ಲಿ ಈ ಬಾರಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಇದೇ ಕ್ಷೇತ್ರದಿಂದ ಈಸಲ ಶತ್ರುಘ್ನ ಸಿನ್ಹಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.