ಜಮ್ಮು&ಕಾಶ್ಮೀರ,ಎ.12: ಜಮ್ಮುಕಾಶ್ಮೀರದ ಬಾರಮುಲ್ಲಾದಲ್ಲಿ ನಡೆದ ಅಪಘಾತವೊಂದರಲ್ಲಿ ಹತ್ತು ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಪೊಲೀಸರು ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿದ್ದು ಕಳೆದ ಇಪ್ಪತ್ತನಾಲ್ಕು ಗಂಟೆಗಳಿಂದ ಇಲ್ಲಿ ಸಣ್ಣದಾಗಿ ಮಳೆಯಾಗುತ್ತಿದೆ. ಇದು ಪೊಲೀಸರು ಸಂಚರಿಸುತ್ತಿದ್ದ ಟ್ರಕ್ ಪಲ್ಟಿಯಾಗಲು ಕಾರಣವೆನ್ನಲಾಗುತ್ತಿದೆ. ಗಾಯಾಳು ಪೊಲೀಸರನ್ನು ಕೂಡಲೇ ಬಾರಮುಲ್ಲಾ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.












