ಕ್ವೆಟ್ಟ,ಎ.12: ಪಾಕಿಸ್ತಾನದ ಕ್ವೆಟ್ಟದಲ್ಲಿಸ್ಫೋಟ ನಡೆದಿದ್ದು ಕನಿಷ್ಠ ಹದಿನಾರು ಮಂದಿ ಸಾವಿಗೀಡಾಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಹನ್ನೆರಡು ಮಂದಿ ಗಾಯಗೊಂಡಿದ್ದಾರೆ. ಕ್ವೆಟ್ಟದ ತರಾಕಿ ಮಾರುಕಟ್ಟೆಯಲ್ಲಿ ಯಾರೋ ಇರಿಸಿದ್ದ ಸ್ಫೋಟಕ ವಸ್ತುಗಳು ಸ್ಫೋಟಗೊಂಡಿವೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಎಕ್ಸ್ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ. ಪೊಲೀಸರು ಮತ್ತು ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದ್ದಾರೆ. ತುರ್ತು ರಕ್ಷಣಾ ಕಾರ್ಯದಲ್ಲಿ ವ್ಯಸ್ತರಾಗಿದ್ದಾರೆ. ಸ್ಫೋಟದ ಹಿಂದೆ ಯಾರ ಕೈವಾಡ ಇದೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.












