ಲೋಕಸಭೆ: ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

0
202

ಸನ್ಮಾರ್ಗ ವಾರ್ತೆ

18ನೇ ಲೋಕಸಭೆಯ ವಿಪಕ್ಷ ನಾಯಕನಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಯ್ಕೆಯಾಗಿರುವುದಾಗಿ ವರದಿಯಾಗಿದೆ.

ದೆಹಲಿಯಲ್ಲಿ ಇತ್ತೀಚೆಗೆ ಕಾಂಗ್ರೆಸ್‌ನ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಈ ಸಭೆಯ ಬಳಿಕ ಮಾತನಾಡಿದ್ದ ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, “ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ಸರ್ವಾನುಮತದಿಂದ ರಾಹುಲ್ ಗಾಂಧಿಯವರಿಗೆ ಮನವಿ ಮಾಡಲಾಗಿದೆ” ಎಂದು ತಿಳಿಸಿದ್ದರು.

https://x.com/ANI/status/1805631431076724857?t=bJwN8v0q0x7diCgI396N1A&s=19

ಇಂದು(ಜೂನ್ 25) ಕೂಡ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆಸಲಾಗಿತ್ತು. ಈ ಸಭೆಯ ಬಳಿಕ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, “ಉತ್ತರ ಪ್ರದೇಶದ ರಾಯ್‌ಬರೇಲಿಯ ಸಂಸದರಾಗಿರುವ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿಪಕ್ಷ ನಾಯಕನಾಗಿ ನೇಮಿಸಲಾಗಿದೆ. ಈ ಬಗ್ಗೆ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರಿಗೆ ಮಾಹಿತಿ ನೀಡಲಾಗುವುದು” ಎಂದು ತಿಳಿಸಿದ್ದಾರೆ.

https://x.com/INCIndia/status/1805624695930470476?t=ndGLfqFWGb_DKsoTK85kRg&s=19