ಕುತ್ತಾರ್: ಕಂಪೌಂಡ್ ಕುಸಿದು ಮನೆ ಮೇಲೆ ಬಿದ್ದು ಇಬ್ಬರು ಮಕ್ಕಳು ಸಹಿತ ದಂಪತಿಗಳು ಮೃತ್ಯು

0
360

ಸನ್ಮಾರ್ಗ ವಾರ್ತೆ

ಉಳ್ಳಾಲ: ಆವರಣ ಗೋಡೆ (ಕಂಪೌಂಡ್) ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳ ಸಹಿತ ದಂಪತಿ ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿರುವ ಬಗ್ಗೆ ಬುಧವಾರ ವರದಿಯಾಗಿದೆ.

ಮೃತರನ್ನು ಯಾಸಿ‌ರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ.

ಅಬೂಬಕ್ಕರ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಯಾಸಿರ್ ಅವರ ಮನೆಯ ಗೋಡೆ ಮೇಲೆ ಬಿದ್ದು ದುರಂತ ಸಂಭವಿಸಿದೆ. ಮನೆಯ ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.