ಸನ್ಮಾರ್ಗ ವಾರ್ತೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ, ನಾಳೆ ಶುಕ್ರವಾರ, ಜೂ. 28ರಂದು ದಕ್ಷಿಣ ಕನ್ನಡದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಸಾರಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.