ತಿರುಪತಿ ಲಡ್ಡು ವಿವಾದ; ಆಂಧ್ರ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡುರನ್ನು ತರಾಟೆಗೆತ್ತಿಕೊಂಡ ಸುಪ್ರೀಂ ಕೋರ್ಟ್

0
110

ಸನ್ಮಾರ್ಗ ವಾರ್ತೆ

ತಿರುಪತಿ ಲಡ್ಡು ವಿವಾದದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಹಿನ್ನಡೆಯಾಗಿದೆ. ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆಯ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿದ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ಎತ್ತಿಕೊಂಡಿದೆ.

ದೇವರುಗಳನ್ನು ರಾಜಕಾರಣದಿಂದ ದೂರವಿಡಬೇಕೆಂದು ನಾವು ನಿರೀಕ್ಷಿಸುತ್ತೇವೆ. ನೀವು ಎಸ್ಐಟಿ ಮೂಲಕ ತನಿಖೆಗೆ ಆದೇಶಿಸಿರುವಾಗ ಪತ್ರಿಕಾಗೋಷ್ಠಿ ನಡೆಸುವ ಅವಶ್ಯಕತೆ ಏನಿತ್ತು ಎಂದು ಮುಖ್ಯಮಂತ್ರಿ ಪರ ವಕೀಲರನ್ನು ಖಾರವಾಗಿ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಪ್ರಯೋಗಾಲಯದ ವರದಿಯಲ್ಲಿ ಕೆಲವು ಗೊಂದಲಗಳಿವೆ. ಇದು ಸ್ಪಷ್ಟವಾಗಿಲ್ಲ ಮತ್ತು ತುಪ್ಪವನ್ನು ತಿರಸ್ಕರಿಸಲಾಗಿದೆ ಎಂದು ಪ್ರಾಥಮಿಕವಾಗಿ ಸೂಚಿಸುತ್ತದೆ. ಅದನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ನೀವೇ ತನಿಖೆಗೆ ಆದೇಶಿಸಿದ್ದರೆ ಸಾರ್ವಜನಿಕವಾಗಿ ಹೇಳಿಕೆ ನೀಡುವ ಅಗತ್ಯವೇನಿತ್ತು ಎಂದು ನ್ಯಾಯಮೂರ್ತಿ ವಿಶ್ವನಾಥನ್ ಅವರು ಆಂಧ್ರಪ್ರದೇಶವನ್ನು ಪ್ರತಿನಿಧಿಸಿದ ಹಿರಿಯ ವಕೀಲರಾದ ಮುಕುಲ್ ರೊಟಗಿ ಅವರನ್ನು ಪ್ರಶ್ನಿಸಿದ್ದಾರೆ.