ಪ್ರತಿಷ್ಠಿತ ಎ ಕೆ ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ ನಿಧನ

0
419

ಸನ್ಮಾರ್ಗ ವಾರ್ತೆ

ಮಂಗಳೂರು, ಅ 8: ಪ್ರತಿಷ್ಠಿತ ಎ ಕೆ ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ ಅವರು ಮಂಗಳವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.

ಹೈಲ್ಯಾಂಡ್ ನ ಇಹ್ಸಾನ್ ಮಸೀದಿಯ ಸ್ಥಾಪಕಾಧ್ಯಕ್ಷರಾಗಿದ್ದ ಅವರು ಸಾಮಾಜಿಕ, ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಸರಳ ಸಜ್ಜನ ವ್ಯಕ್ತಿತ್ವದ ಪರೋಪಕಾರಿ ಮನೋಭಾವದವರಾಗಿದ್ದರು. ಎ ಕೆ ಗ್ರೂಪ್ ಅನ್ನು ಪ್ರಾರಂಭಿಸಿ ಯಶಸ್ಸಿನ ಉತ್ತುಂಗಕ್ಕೆ ಒಯ್ದು ಪ್ರತಿಷ್ಠಿತ ಬ್ಯಾಂಡ್‌ ಆಗಿ ಪರಿವರ್ತಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಅವರು ಪತ್ನಿ, ನಾಲ್ಕು ಗಂಡು ಮಕ್ಕಳು ಹಾಗೂ ಮೂರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.