EC, CBI, ED ಬಿಜೆಪಿ ನಿಯಂತ್ರಿಸುತ್ತಿದೆ, ಸಂವಿಧಾನದ ಮೇಲೆ ದಾಳಿ ನಡೆಯುತ್ತಿದೆ; ರಾಹುಲ್ ಗಾಂಧಿ

0
240

ಸನ್ಮಾರ್ಗ ವಾರ್ತೆ

ರಾಂಚಿ: ಚುನಾವಣಾ ಆಯೋಗ, ಬ್ಯೂರೋಕ್ರಸಿ, ಮತ್ತು ಕೇಂದ್ರೀಯ ಏಜೆನ್ಸಿಗಳಂತಹ ಸಂಸ್ಥೆಗಳನ್ನು ಕೇಸರಿ ಪಕ್ಷ ನಿಯಂತ್ರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದು, ಬಿಜೆಪಿಯಿಂದ ಸಂವಿಧಾನ ದಾಳಿಯನ್ನು ಎದುರಿಸುತ್ತಿದೆ ಎಂದು ಹೇಳಿದ್ದಾರೆ.

ಜಾತಿ ಗಣತಿ ಮತ್ತು ಮೀಸಲಾತಿ ಮೇಲಿನ 50 ಪ್ರತಿಶತ ಮಿತಿಯನ್ನು ತೆಗೆದುಹಾಕುವುದನ್ನು ಯಾವುದೇ ಶಕ್ತಿಯಿಂದ ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

“ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಎಲ್ಲಾ ಕಡೆಯಿಂದ ಸಂವಿಧಾನ ನಿರಂತರ ದಾಳಿಗೆ ಒಳಗಾಗುತ್ತಿದ್ದು, ಅದನ್ನು ರಕ್ಷಿಸಬೇಕಾಗಿದೆ” ಎಂದು ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುನ್ನ ರಾಂಚಿಯಲ್ಲಿ ನಡೆದ ‘ಸಂವಿಧಾನ ಸಮ್ಮಾನ್ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡುತ್ತಾ ರಾಹುಲ್ ಗಾಂಧಿ ಆರೋಪಿಸಿದರು.