ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ನೋಯಿ ಸಹೋದರನ ಸುಳಿವು ನೀಡಿದರೆ 10 ಲಕ್ಷ; NIA ಘೋಷಣೆ

0
79

ಸನ್ಮಾರ್ಗ ವಾರ್ತೆ

ಮುಂಬೈ: ಬಂಧಿತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ನೋಯಿ ಅವರ ಸಹೋದರ ಅನ್ನೋಲ್ ಕುರಿತು ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿಗಳ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಶುಕ್ರವಾರ ಘೋಷಿಸಿದೆ.

ಈ ಘೋಷಣೆಯಿಂದ ಎನ್‌ಐಎ ಈ ಪ್ರಕರಣದ ತನಿಖೆಯನ್ನು ಇನ್ನಷ್ಟು ಗಟ್ಟಿಗೊಳಿಸಲು ಮತ್ತು ಆರೋಪಿಯನ್ನು ಪತ್ತೆಹಚ್ಚಲು ಪ್ರಯತ್ನ ನಡೆಸುತ್ತಿದೆ.

ಎಎನ್‌ಐ’ ಸುದ್ದಿಸಂಸ್ಥೆ ವರದಿ ಮಾಡಿರುವ ಪ್ರಕಾರ, ರಾಷ್ಟ್ರೀಯ ತನಿಖಾ ದಳ (ಎನ್‌ಐಎ) 2022ರಲ್ಲಿ ದಾಖಲಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಲಾರೆನ್ಸ್ ಬಿಷ್ನೋಯಿ ಅವರ ಸಹೋದರ ಅನ್ನೋಲ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದ್ದು, ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಇತ್ತೀಚೆಗೆ ನಡೆದ ಗುಂಡು ಹಾರಿಸುವ ಘಟನೆಯಲ್ಲಿ ಭಾಗಿಯಾಗಿದ್ದ ಶೂಟರ್‌ಗಳು, ಪೋಲಿಸ್ ವಿಚಾರಣೆಯಲ್ಲಿ ಈ ಕೃತ್ಯವನ್ನು ಅನ್ನೋಲ್‌ ಅವರ ಸೂಚನೆಯ ಮೇರೆಗೆ ನಡೆಸಿದ್ದಾರೆ ಎಂಬುದಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.