ಸನ್ಮಾರ್ಗ ವಾರ್ತೆ
ಜೆಮ್ಶೆಡ್ಪುರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದು, “ನೋಟು ಅಮಾನ್ಯೀಕರಣ ಮತ್ತು ಜಿಎಸ್ಟಿ ನೀತಿಗಳು ಬಡವರು, ರೈತರು ಮತ್ತು ಕಾರ್ಮಿಕರನ್ನು ಕೊಲ್ಲುವ ಅಸ್ತ್ರಗಳಾಗಿವೆ” ಎಂದು ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ಸರ್ಕಾರದ ಆರ್ಥಿಕ ನೀತಿಗಳು ದೇಶದಲ್ಲಿ ನಿರುದ್ಯೋಗವನ್ನು ಹರಡುತ್ತಿವೆ ಎಂದು ಆರೋಪಿಸಿದ ಗಾಂಧಿ, “ಈ ನಿರುದ್ಯೋಗವು ಬಡವರ ಮೇಲೆ ತೀವ್ರವಾಗಿ ಪರಿಣಾಮ ಬೀರುತ್ತಿದೆ” ಎಂದು ಹೇಳಿದರು.
“ಭಾರತದಲ್ಲಿ ಪ್ರೀತಿ ಮತ್ತು ದ್ವೇಷದ ನಡುವೆ ಹೋರಾಟ ನಡೆಯುತ್ತಿದ್ದು, ಜೊತೆಗೆ ಇದು ಹಿಂಸಾಚಾರ ಮತ್ತು ಏಕತೆಯ ನಡುವಿನ ಹೋರಾಟವೂ ಆಗಿದೆ. ಬಿಜೆಪಿ-ಆರ್ಎಸ್ಎಸ್ ದೇಶದ ಜನರನ್ನು ಜಾತಿ, ಧರ್ಮ ಮತ್ತು ಭಾಷೆಯ ಆಧಾರದ ಮೇಲೆ ವಿಭಜಿಸಲು ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸಂವಿಧಾನದ ಮೌಲ್ಯಗಳನ್ನು ರಕ್ಷಿಸಲು ಬದ್ಧವಾಗಿದೆ. ಬಿಜೆಪಿ-ಆರ್ಎಸ್ಎಸ್ ಸಂವಿಧಾನವನ್ನು ಹಾನಿಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಗಾಂಧಿ ಕಟುವಾಗಿ ಟೀಕಿಸಿದರು.












