ಸನ್ಮಾರ್ಗ ವಾರ್ತೆ
ಲಕ್ನೋ: ಈದ್ ಪ್ರಾರ್ಥನೆಯ ನಂತರ ಪ್ಯಾಲೆಸ್ಟೀನಿಯನ್ ಧ್ವಜ ಹಾರಿಸಲಾಗಿದ್ದು, ಗಾಜಾದೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದವರ ವಿರುದ್ಧ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ 60 ಮಂದಿಯ ವಿರುದ್ಧ ದೂರು ದಾಖಲಿಸಲಾಗಿದ್ದು, ಐವರನ್ನು ಬಂಧಿಸಲಾಗಿದೆ.
ಈದ್ಗಾದ ಬಳಿಕ ಸಹರಾನ್ಪುರದ ಘಂಟಾಘರ್ ಪ್ರದೇಶದಲ್ಲಿ ಜನ ಗುಂಪು ಸೇರಿ ಪ್ಯಾಲೆಸ್ಟೈನ್ ಪರ ಘೋಷಣೆಗಳನ್ನು ಕೂಗಿ, ಧ್ವಜ ಹಾರಿಸಿದರು. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿದ್ದು, ಇದನ್ನು ಅಕ್ರಮ ಗುಂಪು ಸೇರುವಿಕೆ ಎಂದು ಪರಿಗಣಿಸಿದ್ದು, ಈ ಬಗ್ಗೆ ಯುಪಿ ಸರ್ಕಾರ ಕ್ರಮ ಕೈಗೊಂಡಿದೆ.
“ರ್ಯಾಲಿಯ ವೀಡಿಯೋಗಳನ್ನು ಪರಿಶೀಲಿಸಲಾಗುತ್ತಿದೆ. ಇದರಲ್ಲಿ ಭಾಗಿಯಾದವರನ್ನು ಗುರುತಿಸಲಾಗುತ್ತಿದೆ. ಈಗಾಗಲೇ ಐವರನ್ನು ಬಂಧಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.” ಎಂದು ಪೊಲೀಸ್ ವರಿಷ್ಠಾಧಿಕಾರಿ ವ್ಯೋಮ್ ಬಿಂದಾಲ್ ಹೇಳಿದ್ದಾರೆ.
ಈ ಘಟನೆಯು ಉತ್ತರ ಪ್ರದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಅಧಿಕಾರಿಗಳು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಬಿಗುವಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.












