ಫಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಲಿ: ರಿಯಾಝ್ ಕಡಂಬು

0
612

ಸನ್ಮಾರ್ಗ ವಾರ್ತೆ

ಎಸ್ಡಿಪಿಐ ಮಂಗಳೂರು ನಗರ ಜಿಲ್ಲೆಯ ವತಿಯಿಂದ ಕ್ಯಾಂಡೆಲ್ ಮಾರ್ಚ್

ದೇಶವನ್ನು ಬೆಚ್ಚಿಬೀಳಿಸಿದ ಕಾಶ್ಮೀರದ ಫಹಲ್ಗಾಮ್’ನ ದಾಳಿಯ ವೇಳೆ ದೊಡ್ಡ ಮಟ್ಟದ ಭದ್ರತಾ ವೈಫಲ್ಯವಾಗಿದ್ದು, ಇದರ ಸಂಪೂರ್ಣ ಹೊಣೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಹೊತ್ತುಕೊಳ್ಳಲಿ ಎಂದು ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಗುಡುಗಿದ್ದಾರೆ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ ಜ್ಯೋತಿ ಸರ್ಕಲ್’ನಲ್ಲಿ ಆಯೋಜಿಸಿದ್ದ ಬೃಹತ್ ಕ್ಯಾಂಡೆಲ್ ಮಾರ್ಚ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾ ಸಮಿತಿ ಅಧ್ಯಕ್ಷರಾದ ಜಲೀಲ್ ಕೆ. ಅವರು ಈ ಪ್ರತಿಭಟನೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್ ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಅಡ್ಡೂರು, ಜಿಲ್ಲಾ ಸಮಿತಿ ಸದಸ್ಯ ಶಾಹುಲ್ ಹಮೀದ್ ಕಾಶಿಪಟ್ನ, ಮಂಗಳೂರು ದಕ್ಷಿಣ ಕ್ಷೇತ್ರ ಸಮಿತಿ ಅಧ್ಯಕ್ಷ ಸಿದ್ದೀಕ್ ಬೆಂಗ್ರೆ, ಎಸ್ಡಿಪಿಐ ಮಂಗಳೂರು ಉತ್ತರ ಕ್ಷೇತ್ರ ಸಮಿತಿ ಅಧ್ಯಕ್ಷ ಉಸ್ಮಾನ್ ಗುರುಪುರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.