ಕಾಶ್ಮೀರದ ಬದಲು ಬಿಹಾರದ ಚುನಾವಣಾ ಪ್ರಚಾರಕ್ಕೆ ಹೋದ ಮೋದಿ: ಸಿದ್ದರಾಮಯ್ಯ ಆಕ್ಷೇಪ

0
391

ಸನ್ಮಾರ್ಗ ವಾರ್ತೆ

ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಭಾಗವಹಿಸಬೇಕಿತ್ತು. ಇದು ಮಹತ್ವದ ಸಭೆ ಯಾಗಿತ್ತು. ಆದರೆ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು ನಾವು ಯುದ್ಧದ ಪರ ಇಲ್ಲ. ಕಾಶ್ಮೀರದಲ್ಲಿ ಶಾಂತಿ ನೆಲ್ಲಿಸಲು ಕೇಂದ್ರ ಸರಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನ ಒದಗಿಸಬೇಕಿತ್ತು. ಹಿಂದೆ ಪುಲ್ವಾಮದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯಲ್ಲೂ ಭದ್ರತಾ ವೈಫಲ್ಯವಾಗಿದೆ ಕೇಂದ್ರ ಸರಕಾರವನ್ನು ನಂಬಿ ಪ್ರವಾಸಿಗರು ಹೋಗಿದ್ದರು. ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ ಎಂದವರು ಪ್ರಶ್ನಿಸಿದ್ದಾರೆ.