ಭಾರತ–ಪಾಕಿಸ್ತಾನ ಯುದ್ಧವನ್ನು ನಿಲ್ಲಿಸಿದಂತೆ, ಇಸ್ರೇಲ್-ಇರಾನ್ ಯುದ್ದ ನಾನೇ ನಿಲ್ಲಿಸುವೆ; ಟ್ರಂಪ್

0
730

ಸನ್ಮಾರ್ಗ ವಾರ್ತೆ

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ಕೊನೆಗೊಳಿಸಿದ್ದು ನಾನೇ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಹೇಳಿದ್ದಾರೆ. ಅವರು ಪಶ್ಚಿಮ ಏಷ್ಯಾದ ಶತ್ರು ರಾಷ್ಟ್ರಗಳ ನಡುವೆ ಶೀಘ್ರದಲ್ಲೇ ಶಾಂತಿ ಸಂಧಾನ ಸಾಧ್ಯವಿದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.

“ನಾನೇ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ನಾಲ್ಕು ದಿನಗಳ ಮಿಲಿಟರಿ ಸಂಘರ್ಷವನ್ನು ಕೊನೆಗೊಳಿಸಲು ಮಧ್ಯಸ್ಥಿಕೆ ವಹಿಸಿದ್ದೆನೆ,” ಎಂದು ಟ್ರಂಪ್ ಹೇಳಿದ್ದಾರೆ. ಇದೇ ರೀತಿ ಇರಾನ್ ಮತ್ತು ಇಸ್ರೇಲ್ ನಡುವೆ ಕೂಡ ಶಾಂತಿಯ ಒಪ್ಪಂದವಾಗಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ಪ್ರಯತ್ನಗಳು ಮುಂದುವರಿದಿವೆ ಎಂದು ಅವರು ಹೇಳಿದ್ದಾರೆ.

ಅವರ ಮೊದಲ ಅಧ್ಯಕ್ಷೀಯ ಅವಧಿಯಲ್ಲಿ ಹಲವು ರಾಷ್ಟ್ರಗಳ ನಡುವೆ ದ್ವೇಷವನ್ನು ಕಡಿಮೆ ಮಾಡಿ ಶಾಂತಿಯ ಕ್ರಮಗಳನ್ನು ಹೆಚ್ಚಿಸಿದ್ದೇನೆ ಎಂದವರು ಪುನರುಚ್ಚರಿಸಿದರು. ಸೆರ್ಬಿಯಾ ಮತ್ತು ಕೊಸೊವೊ ನಡುವಿನ ದಶಕಗಳ ಹಳೆಯ ಭಿನ್ನಾಭಿಪ್ರಾಯಗಳನ್ನೂ ತಾನೇ ರಾಜಿ ಮಾಡಿರುವುದಾಗಿ ಅವರು ಹೇಳಿದರು.