ಸನ್ಮಾರ್ಗ ವಾರ್ತೆ
ಉತ್ತರ ಪ್ರದೇಶದ ಶ್ರಾವಸ್ತಿ ಎಂಬಲ್ಲಿ ಹಿಂದೂ ಮತ್ತು ಮುಸ್ಲಿಮರ ನಡುವೆ ಘರ್ಷಣೆ ನಡೆದಿದೆ. ಎರಡು ಸಮುದಾಯಗಳ ಜನರು ದೊಣ್ಣೆ ಇಟ್ಟಿಗೆ ಮತ್ತು ಕಲ್ಲುಗಳನ್ನು ಬಳಸಿದ್ದಾರೆ. ದೇವಾಲಯದ ಭೂಮಿಯಲ್ಲಿ ಆಟವಾಡುತ್ತಿದ್ದ ಮುಸ್ಲಿಂ ಮಕ್ಕಳ ವಿಷಯಕ್ಕೆ ಸಂಬಂಧಿಸಿ ಈ ಘಟನೆ ನಡೆದಿದೆ. ಅನೇಕರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಆಟವಾಡುವ ವಿಷಯವು ಎರಡು ಸಮುದಾಯಗಳ ನಡುವೆ ವಾಗ್ವಾದಕ್ಕೆ ಕಾರಣವಾಯಿತಲ್ಲದೆ ದೈಹಿಕ ಹಲ್ಲೆಗಳು ನಡೆದವು. ಎರಡು ಸಮುದಾಯಗಳ ಜನರು ಪರಸ್ಪರ ಮೆಣಸಿನ ಹುಡಿ ಎಸೆದರು. ಕೇಸರಿ ಧ್ವಜವನ್ನು ಬೀಸಿದರು. ಎರಡು ಕಡೆ 20ಕ್ಕಿಂತಲೂ ಅಧಿಕ ಮಂದಿಗೆ ಗಾಯವಾಯಿತು. ಇವರಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ನಡುವೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡು ಸಮುದಾಯದ ಜೊತೆ ಮಾತಾಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಳಿಕ ಪೊಲೀಸರು ಧ್ವಜ ಮೆರವಣಿಗೆ ನಡೆಸಿದರು. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ ಪೊಲೀಸರು ಧ್ವಜ ಮೆರವಣಿಗೆ ನಡೆಸಿ ಜನರನ್ನು ಚದುರಿಸಿದ್ದಾರೆ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ತಿಳಿದು ಬಂದಿದೆ.












