ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಮಂಗಳೂರಿನಲ್ಲಿ ರಾಷ್ಟ್ರಮಟ್ಟದ ‘ಕಿರಾಅತ್ ಸ್ಪರ್ಧೆ’ ಸೀಸನ್ 4

0
590

ಸನ್ಮಾರ್ಗ ವಾರ್ತೆ

ಮಂಗಳೂರು: ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ (ರಿ.) ಸ್ಥಾಪನೆಯ ದಶಮಾನೋತ್ಸವ (2016–2026) ಪ್ರಯುಕ್ತ, ‘ಕಿರಾಅತ್ – ಸೀಸನ್ 4’ ಎಂಬ ರಾಷ್ಟ್ರಮಟ್ಟದ ಕಿರಾಅತ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಸ್ಪರ್ಧೆಯು 2026 ಜನವರಿ 28ರಂದು ಮಧ್ಯಾಹ್ನ 2.00 ಗಂಟೆಗೆ, ಮಂಗಳೂರಿನ ಇಂಡಿಯನ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯಲಿದೆ.

ದೇಶದ ವಿವಿಧ ಭಾಗಗಳಿಂದ ಖ್ಯಾತ ಕಿರಾಅತ್ ವಾಚಕರು ಈ ಸ್ಪರ್ಧೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ ಬಹುಮಾನವಾಗಿ ರೂ. 1,11,111, ದ್ವಿತೀಯ ಬಹುಮಾನವಾಗಿ ರೂ. 55,555 ಹಾಗೂ ತೃತೀಯ ಬಹುಮಾನವಾಗಿ ರೂ. 33,333 ನೀಡಲಾಗುತ್ತದೆ ಎಂದು ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು 2026 ಜನವರಿ 10ರಿಂದ 20ರವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ +91 91874 15100 ಸಂಖ್ಯೆಯನ್ನು ಸಂಪರ್ಕಿಸುವಂತೆ ಆಯೋಜಕರು ತಿಳಿಸಿದ್ದಾರೆ.

ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ (ರಿ.), ದೇರಳಕಟ್ಟೆ, ಮಂಗಳೂರು, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಚಟುವಟಿಕೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಈ ಕಿರಾಅತ್ ಸ್ಪರ್ಧೆಯು ಧಾರ್ಮಿಕ ಮೌಲ್ಯಗಳು ಮತ್ತು ಕುರ್‌ಆನ್ ಪಠಣದ ಮಹತ್ವವನ್ನು ಜನರಲ್ಲಿ ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಲಾಗಿದೆ.