ಸನ್ಮಾರ್ಗ ವಾರ್ತೆ
ಕಲುಷಿತ ನೀರು ಕುಡಿದು ವಾಂತಿ, ಭೇದಿಯಿಂದ ಹಲವು ಮಂದಿ ಮೃತಪಟ್ಟು, ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಧ್ಯಪ್ರದೇಶದ ಇಂದೋರ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.
ಕಲುಷಿತ ನೀರಿನ ದುರಂತ ಸಂಭವಿಸಿದ ಭಗೀರಥಪುರ ಪ್ರದೇಶಕ್ಕೂ ಭೇಟಿ ನೀಡಿದ ರಾಹುಲ್, ಮೃತರ ಸಂಬಂಧಿಕರನ್ನು ಭೇಟಿಯಾಗಿ ಸಂತೈಸಿದರು. ಕಲುಷಿತ ನೀರು ಸೇವನೆಯಿಂದ ವಾಂತಿ ಮತ್ತು ಭೇದಿ ಸಂಭವಿಸಿ 24 ಮಂದಿ ಮೃತಪಟ್ಟಿದ್ದಾರೆ ಎಂದು ಭಗೀರಥಪುರದ ನಿವಾಸಿಗಳು ರಾಹುಲ್ಗೆ ತಿಳಿಸಿದ್ದಾರೆ. ಆದರೆ, ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ಮಧ್ಯ ಪ್ರದೇಶ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಈ ನಡುವೆ ಸರ್ಕಾರಿ ಸ್ವಾಮ್ಯದ ಮಹಾತ್ಮ ಗಾಂಧಿ ಮೆಮೊರಿಯಲ್ ಮೆಡಿಕಲ್ ಕಾಲೇಜಿನ ವೈದ್ಯರ ತಂಡ ನಡೆಸಿದ ಆಡಿಟ್ನಲ್ಲಿ 15 ಮಂದಿ ಮಾತ್ರ ವಾಂತಿ ಭೇದಿಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಉಲ್ಲೇಖಿಸಲಾಗಿತ್ತು.












