ಸನ್ಮಾರ್ಗ ವಾರ್ತೆ
ಇಂದು (ಫೆ.1, 2026 ಭಾನುವಾರ) ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ.8ರಲ್ಲಿರುವ ಶೃಂಗಾರ್ ಪ್ಯಾಲೇಸ್ ಮೈದಾನದಲ್ಲಿ ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ವತಿಯಿಂದ ಬೆಳಗ್ಗೆ 10ರಿಂದ ರಾತ್ರಿ 10ರವರೆಗೆ ಬ್ಯಾರಿ ಕೂಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಬೃಹತ್ ಬ್ಯಾರಿ ಕೂಟ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ. ಖಾದರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಬೆಳಗ್ಗೆಯಿಂದ ಈ ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ಬ್ಯಾರಿಗಳಿಗೆ ವಿವಿಧ ಬಗೆಯ ಸ್ಪರ್ಧೆಗಳು, ಬಿಝ್ ನೆಸ್ ಸಮ್ಮಿಟ್, ಆ್ಯಂಬ್ಯುಲೆನ್ಸ್ ಲೋಕಾರ್ಪಣೆ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ. ಜೊತೆಗೆ ಕರಾವಳಿಯ ಆಹಾರ ಸಂಸ್ಕೃತಿಯನ್ನು ಪರಿಚಯಿಸುವ ಮಳಿಗೆಗಳು ಕೂಡ ಇರಲಿದೆ ಎಂದು ಸಂಘಟಕರು ಹೇಳಿದ್ದಾರೆ.
Location Map:
https://maps.app.goo.gl/wctEbQDjdoDCUR6V8
ಮಾಹಿತಿಗಾಗಿ ಸಂಪರ್ಕಿಸಿ
8553460111
9844963059












