ʻಪಶ್ಚಿಮ ಏಷ್ಯಾದ ಪರಿಸ್ಥಿತಿ ಕಳವಳಕಾರಿ’: ರಾಜತಾಂತ್ರಿಕತೆಗೆ ಪ್ರಧಾನಿ ಮೋದಿ ಆಗ್ರಹ

0
387

ಸನ್ಮಾರ್ಗ ವಾರ್ತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಆ ಭಾಗದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡುವಂತೆ ಭಾರತವು ಒತ್ತಾಯಿಸುತ್ತಲೇ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದ್ವಿಪಕ್ಷೀಯ ಮಾತುಕತೆಯ ನಂತರ ಮಾತನಾಡಿದ ಮೋದಿ, ಸಂಘರ್ಷಗಳನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸುವುದನ್ನು ಭಾರತ ಬೆಂಬಲಿಸುತ್ತದೆ ಎಂದು ಹೇಳಿದರು.

ಎರಡು ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಾಗಿ ನಿಂತಾಗ, ಜಾಗತಿಕ ವಿಷಯಗಳಲ್ಲಿ ಅವರ ಧ್ವನಿ ಇನ್ನಷ್ಟು ಬಲಗೊಳ್ಳುತ್ತದೆ ಎಂದು ಹೇಳಿದರು. ಪ್ರಸ್ತುತ ಪರಿಸ್ಥಿತಿಯಿಂದ ತೊಂದರೆಗೀಡಾದ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತವು ಹಲವಾರು ದೇಶಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಪ್ರಧಾನಿ ತಿಳಿಸಿದರು.

ಇತ್ತೀಚಿಗಿನ ಇಸ್ರೇಲ್‌-ಯುಎಸ್‌ ಜಂಟಿ ದಾಳಿಗಿಂತ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಭೇಟಿ ನೀಡಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ರವರನ್ನು ಭೇಟಿ ಮಾಡಿದ್ದರು.