ಧಾರವಾಡ | ಕರ್ನಾಟಕ ಯೂತ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಹತ್ಯೆ

0
494

ಸನ್ಮಾರ್ಗ ವಾರ್ತೆ

ಧಾರವಾಡ: ನಗರದ ಯೂತ್ ಕಾಂಗ್ರೆಸ್ ಮುಖಂಡನೊಬ್ಬನನ್ನು ಅಪರಿಚಿತ ದುಷ್ಕರ್ಮಿಗಳು ಅವರ ಮನೆಗೆ ನುಗ್ಗಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸಂತ್ರಸ್ತನನ್ನು ಫೈರೋಜ್ ಪಠಾಣ್ ಎಂದು ಗುರುತಿಸಲಾಗಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಈ ಘಟನೆಯು ಶುಕ್ರವಾರ ತಡರಾತ್ರಿ ಹಶ್ಮಿನಗರ ಪ್ರದೇಶದಲ್ಲಿರುವ ಅವರ ಮನೆಯಲ್ಲಿ ನಡೆದಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭೀತಿ ಮೂಡಿಸಿದೆ. ಪೊಲೀಸರ ಪ್ರಕಾರ, ನಾಲ್ವರು ಅಪರಿಚಿತ ವ್ಯಕ್ತಿಗಳು ಬಲವಂತವಾಗಿ ಮನೆಗೆ ನುಗ್ಗಿ ಪಠಾಣ್ ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಪೂರ್ಣ ಘಟನೆಯು ಹತ್ತಿರದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಇದು ತನಿಖೆಯಲ್ಲಿ ಪ್ರಮುಖ ಸುಳಿವು ನೀಡುವ ನಿರೀಕ್ಷೆಯಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಉಪನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ.