ಸುರತ್ಕಲ್: ಠಾಣಾ ಇನ್‌ಸ್ಪೆಕ್ಟರ್‌ ರಾಮಕೃಷ್ಣ ಅಮಾನತು, ಕರ್ತವ್ಯಲೋಪದ ಆರೋಪ

0
878

ಮಂಗಳೂರು, ಜು. 10: ಇಲ್ಲಿನ ಸುರತ್ಕಲ್‌ ಠಾಣೆಯ ಇನ್‌ಸ್ಪೆಕ್ಟರ್‌ ರಾಮಕೃಷ್ಣರನ್ನು ಅಮಾನತುಪಡಿಸಿ ಮಂಗಳೂರು ಕಮಿಷನರ್‌ ಸಂದೀಪ್‌ ಪಾಟೀಲ್‌ ಆದೇಶ ಹೊರಡಿಸಿದ್ದು, ಇದಕ್ಕೆ ಅಮಲು ಪದಾರ್ಥದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಫಲವಾದುದು ಮತ್ತು ಠಾಣೆಯಲ್ಲಿ ಕರ್ತವ್ಯಲೋಪವೆಸಗಿದ ಕಾರಣವನ್ನು ಹೊರಿಸಲಾಗಿದೆ.

ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಗಾಂಜಾ, ದನಕಳವು ಪ್ರಕರಣಗಳು ಹೆಚ್ಚುತ್ತಿರುವುದನ್ನು ಪರಿಗಣಿಸಿ ಬಗ್ಗೆ ಈ ಕಠಿಣ ಕ್ರಮಕೈಗೊಳ್ಳುವಂತೆ ಕಮಿಷನರ್‌ ಅವರು ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೆ ಈ ವಿಷಯದಲ್ಲಿ ಸುರತ್ಕಲ್‌ ಠಾಣೆಯ ಇನ್‌ಸ್ಪೆಕ್ಟರ್‌ ರಾಮಕೃಷ್ಣ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ ಎನ್ನಲಾಗಿದೆ.

ಅಲ್ಲದೆ, ಹಣಕಾಸು ಸಂಸ್ಥೆಯೊಂದು ವಂಚನೆ ಮಾಡಿದ ಆರೋಪದಲ್ಲಿ ಸಾರ್ವಜನಿಕರು ಠಾಣೆಗೆ ದೂರು ನೀಡಲು ಬಂದಾಗ ಇವರು ಕೇಸು ದಾಖಲಿಸಿರಲಿಲ್ಲ ಎಂಬ ಆರೋಪವೂ ಇದ್ದು, ಅವರು ದೂರುದಾರರನ್ನೇ ಹಿಂದಕ್ಕೆ ಕಳುಹಿಸಿದ್ದರು ಎನ್ನಲಾಗಿದೆ. ಈ ವಿಷಯವೂ ಕಮಿಷನರ್‌ ಅವರ ಗಮನಕ್ಕೆ ಬಂದಿದ್ದು, ಅವರ ಅಮಾನತಿಗೆ ಇದೂ ಕಾರಣವಾಗಿದೆ ಎಂದು ತಿಳಿದುಬಂದಿದೆ.