ಸನ್ಮಾರ್ಗ ವಾರ್ತೆ
ಕೊಡಗು ಜಿಲ್ಲೆ ದುಬಾರೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಅನಿರೀಕ್ಷಿತವಾಗಿ ಆಯ ತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿ ಘಟನೆ ನಡೆದಿದೆ.
ಆನೆಗಳನ್ನು ಸ್ನಾನ ಮಾಡಿಸುವಾಗ ನದಿಯ ಬಳಿ ನಿಂತು ನೋಡುತ್ತಿದ್ದ ತಮಿಳುನಾಡಿನ ಪ್ರವಾಸಿ ಮಹಿಳೆ ತುಳಸಿ (33) ಈ ಅಪಘಾತದಂತಹ ಘಟನೆಯಲ್ಲಿ ಮೃತಪಟ್ಟಿದ್ದಾರೆ.
ಸಾಕಾನೆಗಳಾದ ಕಂಚನ್ ಮತ್ತು ಮಾರ್ತಾಂಡ ಆನೆಗಳು ಸ್ನಾನ ಮಾಡಿಸುತ್ತಿದ್ದ ವೇಳೆ ಪರಸ್ಪರ ಕಾದಾಟ ನಡೆಸಿದ್ದು, ಮಾವುತರು ನಿಯಂತ್ರಿಸುತ್ತಿದ್ದರೂ ಮುನ್ನುಗ್ಗಿದ ಕಂಚನ್ ಆನೆ, ಮಾರ್ತಾಂಡ ಆನೆಗೆ ಗುದ್ದಿದ್ದು, ಮಾರ್ತಾಂಡ ಆಯ ತಪ್ಪಿ ಕೆಳಗೆ ಬಿದ್ದಾಗ, ಈ ಮಹಿಳೆ ಆನೆಯ ಕೆಳಗೆ ಸಿಲುಕಿ ಮೃತಪಟ್ಟಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.












