ಜೂನ್ 28 ರಂದು ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್‌ನ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

0
372

ಸನ್ಮಾರ್ಗ‌ ವಾರ್ತೆ

ಬೆಂಗಳೂರು: ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂನ್ 28ರಂದು ಆದಿತ್ಯವಾರ ಬೆಂಗಳೂರಿನ ಬ್ಯಾರಿ ಸೌಹಾರ್ದ ಭವನದಲ್ಲಿ ಆಯೋಜಿಸಲಾಗಿದೆ.

ಈ ವರ್ಷದ ಬ್ಯಾರಿ ಪ್ರಶಸ್ತಿಯನ್ನು ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ಮತ್ತು ವಾರ್ಷಿಕ ಬ್ಯಾರ್ದಿ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತೆ ಕಾರ್ಕಳದ ಆಯಿಶಾ ಬಾನು ಅವರಿಗೆ ಘೋಷಿಸಲಾಗಿದೆ.

ಇದೇ ಸಂದರ್ಭದಲ್ಲಿ, ವಿದ್ಯಾರ್ಥಿ ಪುರಸ್ಕಾರ ಮತ್ತು ಸಹ ಸಂಘ-ಸಂಸ್ಥೆಗಳ ಸಮ್ಮಿಲನ ಕಾರ್ಯಕ್ರಮವೂ ನಡೆಯಲಿದೆ.

ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಹಾಗೂ ಅತಿಥಿಗಳಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.ಎ. ಸಲೀಂ ಮತ್ತು ಮುಖ್ಯಮಂತ್ರಿಯ ಹಣಕಾಸು ಸಲಹೆಗಾರ ಎಲ್.ಕೆ. ಅತೀಕ್ ಭಾಗವಹಿಸಲಿದ್ದಾರೆ.

ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಅಡೂರ್ ಶಂಶುದ್ದೀನ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.