ಸನ್ಮಾರ್ಗ ವಾರ್ತೆ
ಕೊಚ್ಚಿ: ರಾಜ್ಯ ವಕ್ಫ್ ಮಂಡಳಿಯು ಯಾವುದೇ ನೀತಿ ನಿರ್ಧಾರಗಳನ್ನು ಕೈಗೊಳ್ಳದಂತೆ ಹೈಕೋರ್ಟ್ ತಡೆ ನೀಡಿದೆ. ಬಿಜೆಪಿ ನಾಯಕ ಶಾನ್ ಜಾರ್ಜ್ ಮತ್ತು ಕ್ರಿಶ್ಚಿಯನ್ ಸಂಘಟನೆಯೊಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಪೀಠವು ನಡೆಸಿದೆ.
ಹೊಸ ವಕ್ಫ್ ತಿದ್ದುಪಡಿ ಕಾಯ್ದೆಯ ಪ್ರಕಾರ, ವಕ್ಫ್ ಮಂಡಳಿಯಲ್ಲಿ ಇಬ್ಬರು ಮುಸ್ಲಿಮೇತರ ಸದಸ್ಯರು ಇರಬೇಕು. ಪ್ರಸ್ತುತ ಇರುವ ವಕ್ಫ್ ಮಂಡಳಿಯಲ್ಲಿ ಯಾವುದೇ ಮುಸ್ಲಿಮೇತರ ಸದಸ್ಯರಿಲ್ಲ. ಇದನ್ನು ಉಲ್ಲೇಖಿಸಿ ಅರ್ಜಿ ಸಲ್ಲಿಸಲಾಗಿತ್ತು. ಹೊಸ ವಕ್ಫ್ ಮಂಡಳಿಯನ್ನು ರಚಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಹೆಚ್ಚಿನ ವಿವರಗಳು ಸ್ಪಷ್ಟವಾಗಬೇಕಿದೆ ಎಂದು ತಿಳಿಸಿದ ನ್ಯಾಯಾಲಯವು, ಮಂಡಳಿಯು ನೀತಿ ನಿರ್ಧಾರಗಳನ್ನು ಕೈಗೊಳ್ಳದಂತೆ ತಡೆ ವಿಧಿಸಿದೆ.












