ಪ್ರಶ್ನೆ ಪತ್ರಿಕೆ ಸೋರಿಕೆ ತಿದ್ದುಪಡಿ ಮಸೂದೆ: ಶ್ಲಾಘಿಸಿದ ವಾಂಗ್ ಚುಕ್

0
253

ಸನ್ಮಾರ್ಗ ವಾರ್ತೆ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಯನ್ನು ಲೋಕಸಭೆ ಅಂಗೀಕರಿಸಿದ ನಂತರ ಸೋನಂ ವಾಂಗ್ ಚುಕ್ ಕೇಂದ್ರ ಸರಕಾರವನ್ನು ಶ್ಲಾಘಿಸಿದ್ದಾರೆ. ಭಾರತದಲ್ಲಿ ಶಿಕ್ಷಣ ಕ್ಷೇತ್ರವನ್ನು ಸುಧಾರಿಸುವ ನಿಟ್ಟಿನಲ್ಲಿ ಇದು ಮೊದಲ ಹೆಜ್ಜೆ ಎಂದವರು ಹೇಳಿದ್ದಾರೆ. ಈ ಬೆಳವಣಿಗೆ ನನಗೆ ತುಂಬಾ ಸಂತೋಷ ತಂದಿದೆ, ಇದು ಶಿಕ್ಷಣ ಕ್ಷೇತ್ರದಲ್ಲಿ ವ್ಯಾಪಕ ಸುಧಾರಣೆಗೆ ಕಾರಣವಾಗಲಿದೆ ಎಂದ ಅವರು ಹೇಳಿದ್ದಾರೆ.

ಇದೇ ವೇಳೆ ಸಿಜೆಪಿ ಮತ್ತು ವಿದ್ಯಾರ್ಥಿಗಳಿಗೆ ನೀಡಿದ ಲಿಖಿತ ಭರವಸೆಗಳನ್ನು ಸರ್ಕಾರ ಗೌರವಿಸಬೇಕು ಎಂದು ವಂಗ್ಚುಕ್ ಆಗ್ರಹಿಸಿದ್ದಾರೆ.

ಪ್ರತಿಭಟನಾಕಾರರ ವಿರುದ್ಧ ಪ್ರಕರಣಗಳನ್ನು ದಾಖಲಿಸಬಾರದು ಮತ್ತು ಯುವಕರ ನಂಬಿಕೆಯನ್ನು ಗೌರವಿಸಬೇಕು ಎಂದವರು ಆಗ್ರಹಿಸಿದ್ದಾರೆ.

ಇದೇ ವೇಳೆ ಈ ತಿದ್ದುಪಡಿ ಮಸೂದೆಯು ಪ್ರಶ್ನೆ ಪತ್ರಿಕೆಗಳ ಸೋರಿಕೆಯ ಹಿಂದಿನ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿದೆ ಎಂದು ಸಿಜೆಪಿ ವಕ್ತಾರ ಆಶುತೋಷ್ ರಾಂಕ ಹೇಳಿದ್ದಾರೆ. ಪ್ರಶ್ನೆ ಪತ್ರಿಕೆಗಳ ಸೋರಿಕೆಯ ನಂತರ ಶಿಕ್ಷೆಯ ಕ್ರಮಗಳ ಮೇಲೆ ಮಸೂದೆ ಕೇಂದ್ರೀಕರಿಸುತ್ತದೆ. ಆದರೆ ಸೋರಿಕೆ ಆಗದಂತೆ ತಡೆಯಲು ಸರ್ಕಾರ ಏನು ಮಾಡ್ತಾ ಇದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದವರು ಆಗ್ರಹಿಸಿದ್ದಾರೆ.