ಪುತ್ತೂರು ಪಿಯು ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಇಬ್ರಾಹೀಂ ಎಂ. ಆಯ್ಕೆ

0
272

ಸನ್ಮಾರ್ಗ ವಾರ್ತೆ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ (ರಿ) ಬೆಂಗಳೂರು, ಪುತ್ತೂರು ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಕೊಂಬೆಟ್ಟುವಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು.

ಈ ಸಭೆಯಲ್ಲಿ ತಾಲೂಕು ಘಟಕದ ಅಧ್ಯಕ್ಷರಾಗಿ ಉಪ್ಪಿನಂಗಡಿ ಪ.ಪೂ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಇಬ್ರಾಹೀಂ ಎಂ. ಹಾಗೂ ಕಾರ್ಯದರ್ಶಿಯಾಗಿ ಬೆಟ್ಟಂಪಾಡಿ ಸರಕಾರಿ ಪ.ಪೂ ಕಾಲೇಜಿನ ಉಪನ್ಯಾಸಕ ಕಮಲಾಕ್ಷ ಅನಡ್ಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಲ್ಲದೆ, ಕೋಶಾಧಿಕಾರಿಯಾಗಿ ಕೆಯ್ಯರು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಇಸ್ಮಾಯೀಲ್ ಪಿ., ಉಪಾಧ್ಯಕ್ಷರಾಗಿ ಬಿಳಿಯೂರು ಕಟ್ಟೆ ಪ.ಪೂ ಕಾಲೇಜಿನ ಉಪನ್ಯಾಸಕಿ ಇಂದಿರಾ ಭಂಡಾರಿ ಕೆ.ಎಂ, ಕಾರ್ಯಾಧ್ಯಕ್ಷರಾಗಿ ಕಬಕ ಪ.ಪೂ ಕಾಲೇಜಿನ ಉಪನ್ಯಾಸಕ ಶ್ರೀನಿವಾಸ ಬಡೆಕ್ಕಿಲ್ಲಾಯ, ಸಂಚಾಲಕರಾಗಿ ಉಪ್ಪಿನಂಗಡಿ ಸರಕಾರಿ ಪಪೂ ಕಾಲೇಜಿನ ಉಪನ್ಯಾಸಕಿ ಆಶಾ ಆರ್, ಹಾಗೂ ಸಂಘಟನಾ ಕಾರ್ಯದರ್ಶಿಗಳಾಗಿ ಕೊಂಬೆಟ್ಟು ಪ.ಪೂ ಕಾಲೇಜಿನ ಉಪನ್ಯಾಸಕ ಪ್ರಕಾಶ್ ವಿ.ಕೆ. ಮತ್ತು ಮುಕ್ರಂಪಾಡಿ ಸರಕಾರಿ ಬಾಲಕಿಯರ ಪ.ಪೂ ಕಾಲೇಜಿನ ಉಪನ್ಯಾಸಕ ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಆಯ್ಕೆ ಪ್ರಕ್ರಿಯೆಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಹರಿಪ್ರಕಾಶ್‌ ಬಿ, ಕಾರ್ಯಾಧ್ಯಕ್ಷ ಚಂದ್ರನಾಥ ಎಂ, ದ.ಕ. ಜಿಲ್ಲಾ ಸಲಹಾ ಸಮಿತಿ ಸದಸ್ಯ ವಿದ್ಯಾಧರ ರೈ ಹಾಗೂ ತಾಲೂಕಿನ ವಿವಿಧ ಉಪನ್ಯಾಸಕರು ಉಪಸ್ಥಿತರಿದ್ದರು.