ಮಂಗಳೂರು, ಜು. 22: ಕಳೆದ 10 ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಬಿಟಿವಿ ನ್ಯೂಸ್ ಮಂಗಳೂರು ಕ್ಯಾಮರಾಮನ್ ನಾಗೇಶ್ ಪಡು ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಡೆಂಗ್ಯೂ ಕಾಯಿಲೆಯಿಂದ ಬಳಲುತ್ತಿದ್ದ ನಾಗೇಶ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಡೆಂಗ್ಯೂ ಉಲ್ಬಣಿಸಿದ್ದರಿಂದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.
ಮಂಗಳೂರಿನ ನೀರುಮಾರ್ಗ ಸಮೀಪದ ಪಡು ನಿವಾಸಿ ನಾಗೇಶ್, ಪತ್ನಿ, ಮಗು, ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.












