ರಹ್ಮಾನಿಯಾ ವೆಲ್ಫೇರ್ & ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ

0
243

ಸನ್ಮಾರ್ಗ ವಾರ್ತೆ

ಬೀರಿ, ಆಗಸ್ಟ್ 20: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ರಹ್ಮಾನಿಯಾ ವೆಲ್ಫೇರ್ & ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಆಶ್ರಯದಲ್ಲಿ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು (ರಿ.) ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಆಗಸ್ಟ್ 23ರಂದು (ಭಾನುವಾರ) ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೊಟೆಕಾರು ವ್ಯವಸಾಯ ಬ್ಯಾಂಕ್, ಬೀರಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಹಾಗೂ ಉಚಿತ ಆರೋಗ್ಯ ತಪಾಸಣೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

“ರಕ್ತದಾನ ಮಹಾದಾನ – ಜೀವ ಉಳಿಸಲು ಕೈಜೋಡಿಸಿ” ಎಂಬ ಸಂದೇಶದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಲು ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶೇಖ್ ಮೊಹಮ್ಮದ್ ಅಬ್ದುಲ್ (7090128600), ಸಿದ್ದೀಕ್ ಮಂಜೇಶ್ವರ (9845707090), ಶೇಖ್ ಅಹ್ಮದ್ ಅಮೀನ್ (9945215119), ಅಯ್ಯುಬ್ ಖಾನ್ (9916188604) ಹಾಗೂ ಮುನೀರ್ ಶೇಖ್ (9591092378) ಅವರನ್ನು ಸಂಪರ್ಕಿಸಬಹುದು.